ಮೆಮೊಸ್ ತಿಂದ ಮಹಿಳೆ ಸಾವು, 20ಕ್ಕೂ ಹೆಚ್ಚು ಜನ ಗಂಭೀರ

ಮೆಮೊಸ್ ತಿಂದ ಮಹಿಳೆ ಸಾವು, 20ಕ್ಕೂ ಹೆಚ್ಚು ಜನ ಗಂಭೀರ

ಹೈದರಾಬಾದ್: ರಸ್ತೆ ಬದಿ ಮೊಮೊಸ್ ಮಹಿಳೆಯೊಬ್ಬರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನ ಆಸ್ವಸ್ಥಗೊಂಡ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್‌ನಲ್ಲಿ ನಡೆದಿದೆ.

ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ತನಿಖೆ ನಡೆಯುತ್ತಿದೆ. ಮೃತ ಮಹಿಳೆ ಮತ್ತು ಆಸ್ವಸ್ಥಗೊಂಡವರು ‘ದೆಹಲಿ ಮೊಮೊಸ್’ ಹೆಸರಿನ ಫುಡ್ ಸ್ಟಾಲ್‌ನಿಂದ ಮೊಮೊಸ್ ಸೇವಿಸಿದ್ದಾರೆ. ಚಿಂತಲ್ ಬಸ್ತಿಯಲ್ಲಿರುವ ಈ ಸ್ಟಾಲ್ ಅನ್ನು ಮೂರು ತಿಂಗಳ ಹಿಂದೆ ಬಿಹಾರದಿಂದ ಬಂದ ಆರು ಜನ ಸೇರಿ ಪ್ರಾರಂಭಿಸಿದ್ದರು. ಸ್ಟಾಲ್ ನಡೆಸುತ್ತಿದ್ದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಮೊಸ್ ತಿಂದ ಒಂದು ಗಂಟೆಯ ನಂತರ ಮಹಿಳೆಗೆ ತೀವ್ರ ಹೊಟ್ಟೆನೋವು ಅರಂಭವಾಗಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ತನಿಖೆ ಆರಂಭಿಸಿದ್ದು, ಈ ವೇಳೆ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದೆ. ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವ್ಯಾಪಾರ ಚಟುವಟಿಕೆಗಳನ್ನು ನಿಲ್ಲಿಸುವಂತೆ ಮಾರಾಟಗಾರರಿಗೆ ನೋಟಿಸ್ ನೀಡಲಾಗಿದೆ

Ads on article

Advertise in articles 1

advertising articles 2

Advertise under the article