ಮಂಗಳೂರು:ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ; ನನ್ನೊಂದಿಗೆ ಬಾರದಿದ್ದರೆ 24 ತುಂಡು ಮಾಡುವೆ ಎಂದು ಕೊಲೆ ಬೆದರಿಕೆ ಹಾಕಿದ ಯುವಕ; ಕಾನೂನು ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಡಾಕ್ಟರ್ ವೈ ಭರತ್ ಶೆಟ್ಟಿ
Friday, October 25, 2024
ಸುರತ್ಕಲ್: ಇಲ್ಲಿನ ಇಡ್ಯಾ ನಿವಾಸಿ ಶಾರಿಕ್ ನೂರ್ಜಹಾನ್ ಎಂಬಾತ ಹಿಂದೂ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ್ದನು. ಈ ಯುವಕನ ವಿರುದ್ಧ ಪೊಲೀಸರು ಕ್ಷಿಪ್ರ ಕ್ರಮವನ್ನು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ದೂರಿರುವ ಶಾಸಕ ಡಾ. ಭರತ್ ಶೆಟ್ಟಿ ವೈ ಪೊಲೀಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುವತಿಯ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭ ನಿರ್ಲಕ್ಷ್ಯವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ. ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು, ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು ಎಂದು ಖಂಡಿಸಿದ್ದಾರೆ.
ಹಿಂದೂ ಕಾರ್ಯಕರ್ತರು ಸಹನೆ ಕಳೆದುಕೊಳ್ಳುವ ಮುನ್ನ ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಪರಿಣಾಮ ಎದುರಿಸ ಬೇಕಾದಿತು ಎಂದು ಶಾಸಕರು ಹೇಳಿದ್ದಾರೆ . ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.