ಬೆಳ್ತಂಗಡಿ :ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು – ಮಹಿಳೆ ಮೃತ್ಯು
Monday, October 14, 2024
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.
ಮೃತರನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ) ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಕಾರಣ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಕಾರು ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದಿದೆ. ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ಣು, ಜೀವಹಾನಿಗಳು ನಡೆದಿವೆ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಇಲ್ಲಿ ಅಪಘಾತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.