ಸಿ.ಪಿ.ಯೋಗೇಶ್ವರ್ ಬಿಜೆಪಿಗೆ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ
Tuesday, October 22, 2024
ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ
ನಿನ್ನೆ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿ ಜೊತೆಯಾಗಿ ಸಿಎಂ ನಿವಾಸಕ್ಕೆ ಆಗಮಿಸಿದ್ದರು. ಸಿಎಂ ಭೇಟಿ ಬಳಿಕ ಕೆಪಿಸಿಸಿ ಕಚೇರಿಗೆ ತೆರಳಿದ್ದು, ಸಿಎಂ, ಡಿಸಿಎಂ ಸಮ್ಮುಖದಲ್ಲು ಅಧಿಕೃತ ಪಕ್ಷ ಸೇರ್ಪಡೆಯಾಗಿದ್ದಾರೆ.