ಚನ್ನಪಟ್ಟಣಕ್ಕೆ ಡಿಕೆಶಿ ಸಹೋದರ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ ಸ್ಪರ್ಧೆ ಬಹುತೇಕ ಖಚಿತ
Sunday, October 20, 2024
ಬೆಂಗಳೂರು: ಚನ್ನಪಟ್ಟಣಕ್ಕೆ ಡಿಕೆ ಸುರೇಶ್ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಒಂದು ವೇಳೆ ಆಗದೇ ಇದ್ದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುವ ಸಾಧ್ಯತೆಯಿದೆ.
ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಚನ್ನಪಟ್ಟಣಕ್ಕೆ ಡಿಕೆ ಸುರೇಶ್ 99% ಸ್ಪರ್ಧೆ ಮಾಡುತ್ತಾರೆ. ಒಂದು ವೇಳೆ ಕಣದಿಂದ ಹಿಂದಕ್ಕೆ ಸರಿದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಎಂದು ಸಭೆಯಲ್ಲಿ ಸಿಎಂ, ಡಿಸಿಎಂ ತಿಳಿಸಿದ್ದಾರೆ