ಮಲ್ಪೆ:ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ, ಮಕ್ಕಳಿಲ್ಲದ ಕೊರಗಿನಿಂದ ಮನನೊಂದು ಆತ್ಮಹತ್ಯೆ
Friday, October 18, 2024
ಮಲ್ಪೆ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಅತ್ರಾಡಿ ಗ್ರಾಮದ ಬಾಳು (89) ಅವರು ಅ. 15ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದು ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮನೆಯವರು ಪರಿಸರದ ಸುವರ್ಣ ನದಿ ಸೇತುವೆಯ ಬಳಿ ಹುಡುಕಾಟ ನಡೆಸಿದಾಗ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಬಗ್ಗೆ ಸ್ಥಳೀಯರಲ್ಲಿ ವಿಚಾರಿಸಿದಾಗ ಯಾರೋ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿಸಿದ್ದರು. ಅ. 16ರಂದು ಎಲ್ಲಿಯೂ ಪತ್ತೆಯಾಗಿರಲಿಲ್ಲ.
ಅ. 17ರಂದು ತಿಮ್ಮಣ್ಣಕುದ್ರು ಹ್ಯಾಂಗಿಂಗ್ ಬ್ರಿಡ್ಜ್ ನದಿಯ ಬಳಿ ಬಾಳು ಅವರ ಮೃತದೇಹ ಪತ್ತೆಯಾಗಿದೆ. ಬಾಳು ಅವರು ಮಕ್ಕಳಿಲ್ಲದ ಕೊರಗಿನಿಂದ ಮಾನಸಿಕವಾಗಿ ನೊಂದಿದ್ದರು. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಪೆ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.