ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ
Tuesday, October 29, 2024
ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.