ದಕ್ಷಿಣಕನ್ನಡ: ವಿಧಾನ ಪರಿಷತ್ ಉಪಚುನಾವಣೆ;ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಸುಲಭ ಗೆಲುವು ಸಾಧನೆ.
Thursday, October 24, 2024
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿಯವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ(ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.
ಒಟ್ಟು 5907ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ, ಅದರಂತೆ ಕಾಂಗ್ರೆಸ್ ನ ರಾಜು ಪೂಜಾರಿ 1958 ಮತಗಳನ್ನು ಗಳಿಸಿದರೆ, ಎಸ್ ಡಿಪಿಐ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದರೆ 90 ಮತಗಳು ಅಮಾನ್ಯಗೊಂಡಿವೆ