ಜಮ್ಮು ಕಾಶ್ಮೀರ :ಕಾಶ್ಮೀರದಲ್ಲಿ300 ಅಡಿ ಕಂದಕಕ್ಕೆ ಬಿದ್ದ ಸೇನಾ ವಾಹನ ; ಕರ್ನಾಟಕದ ಮೂವರು ಯೋಧರು ನಿಧನ,  ಸಂತಾಪ ಸೂಚಿಸಿದ ಸಿಎಂ

ಜಮ್ಮು ಕಾಶ್ಮೀರ :ಕಾಶ್ಮೀರದಲ್ಲಿ300 ಅಡಿ ಕಂದಕಕ್ಕೆ ಬಿದ್ದ ಸೇನಾ ವಾಹನ ; ಕರ್ನಾಟಕದ ಮೂವರು ಯೋಧರು ನಿಧನ, ಸಂತಾಪ ಸೂಚಿಸಿದ ಸಿಎಂ

ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ ದುರ್ಘಟನೆ ಸಂಭವಿಸಿತ್ತು.

ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಬೆಳಗಾವಿ‌ ತಾಲೂಕಿನ‌ ಪಂತ‌ನಗರದ ಯೋಧ ದಯಾನಂದ ತಿರಕಣ್ಣವರ (44) ಹಾಗೂ ಕುಂದಾಪುರದ ಅನೂಪ್ ಎಂಬವರೂ ಕೂಡ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಹೇಶ್ ಮರಿಗೊಂಡ ಅವರು 11ನೇ ಮರಾಠಾ ರೆಜಿಮೆಂಟ್​ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೈನಿಕರನ್ನು ಹೊತ್ತ ವಾಹನವು ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ.


 ಈ ಬಗ್ಗೆ ಮುಖ್ಯಮಂತ್ರಿಗಳು ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ''ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ'' ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article