ಕಾರವಾರ: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ಅಂಕೋಲಾ ತಾಲೂಕಿನ ತುಳಸಿ ಗೌಡ(86) ವಿಧಿವಶ . ವಯೋ ಸಹಜ ಖಾಯಿಲೆಯಿಂದ ಬಳಲಿಕೆ

ಕಾರವಾರ: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ಅಂಕೋಲಾ ತಾಲೂಕಿನ ತುಳಸಿ ಗೌಡ(86) ವಿಧಿವಶ . ವಯೋ ಸಹಜ ಖಾಯಿಲೆಯಿಂದ ಬಳಲಿಕೆ

ಕಾರವಾರ, ಡಿ.16: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾಗಿದ್ದ ಅಂಕೋಲಾ ತಾಲೂಕಿನ ತುಳಸಿ ಗೌಡ(86) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ 

ಕಳೆದ ಎಂಟು ತಿಂಗಳಿನಿಂದ ವಯೋ ಸಹಜ ಅನಾರೋಗ್ಯಕ್ಕೆ ತುತ್ತಾದ ತುಳಸಿ ಗೌಡ ಅವರಿಗೆ ಆಸ್ಪತ್ರೆ ಸೇರಿದಂತೆ ಅನೇಕ ಕಡೆ ಚಿಕಿತ್ಸೆಯನ್ನು ನೀಡಲಾಗಿತ್ತು. ಹೊನ್ನಳ್ಳಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಜಗದೀಶ ನಾಯಕ ತುಳಸಿ ಗೌಡ ಮನೆಗೆ ತೆರಳಿ ಮೃತಪಟ್ಟಿರುವುದು ಖಚಿತ ಪಡಿಸಿದ್ದಾರೆ.
ತುಳಸಿ ಗೌಡರವರು ಒರ್ವ ಪುತ್ರ ಮತ್ತು ಪುತ್ರಿ, ಮೊಮ್ಮಕ್ಕಳು ಮರಿಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. 

ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. 2020ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. 

Ads on article

Advertise in articles 1

advertising articles 2

Advertise under the article