ಬೆಂಗಳೂರು :ದಿಢೀರನೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ಚೈತ್ರ ಕುಂದಾಪುರ.ಬಿಗ್ ಬಾಸ್ ಸ್ಪರ್ಧೆಯಲ್ಲಿ ಹೊಸ ಟ್ವಿಸ್ಟ್
Tuesday, December 3, 2024
ಬಿಗ್‌ಬಾಸ್ ಸೀಸನ್ 11 ರೋಚಕ ಘಟ್ಟವನ್ನ ತಲುಪಿದೆ. ಕನ್ನಡ ಕಿರುತೆರೆ ಬಿಗ್ ರಿಯಾಲಿಟಿ ಶೋದ ಹೊಸ ಅಧ್ಯಾಯ ವೀಕ್ಷಕರನ್ನ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ಮನೆಯ ಸದಸ್ಯರು ಹೊಸ, ಹೊಸ ಟಾಸ್ಕ್‌ಗಳಲ್ಲಿ ಭರಪೂರ ಮನರಂಜನೆ ನೀಡುತ್ತಿದ್ದಾರೆ. ಈ ವಾರದ ಎಲಿಮಿನೇಷನ್‌ಗೆ ಬಿಗ್ ಟ್ವಿಸ್ಟ್ ಬಳಿಕ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಅವರು ಮನೆಯಿಂದ ಹೊರಗೆ ಬಂದಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಇಂದು ದಿಢೀರನೇ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದು ಕೋರ್ಟ್‌ಗೆ ಹಾಜರಾಗಿದ್ದರು. 1ನೇ ಎಸಿಎಂಎಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ಚೈತ್ರಾ ಕುಂದಾಪುರ ಹಾಜರಾಗಿದ್ದು ಅಚ್ಚರಿ ಮೂಡಿಸಿದೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ, ಕೋಟಿ ವಂಚಿಸಿದ ಆರೋಪದಲ್ಲಿ ಚೈತ್ರಾ ಕುಂದಾಪುರ ಅವರ ಮೇಲೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಚೈತ್ರಾ ಕುಂದಾಪುರ ಅವರು ವಿಚಾರಣೆ ಎದುರಿಸಿದ್ದರು.
ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟಿ, ಕೋಟಿ ವಂಚಿಸಿದ್ದ ಪ್ರಕರಣದಲ್ಲಿ ಚೈತ್ರಾ & ಗ್ಯಾಂಗ್ ಮೇಲೆ ತನಿಖೆ ನಡೆದಿತ್ತು. ಈ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಅವರು ಇಂದು ಖುದ್ದು ಕೋರ್ಟ್‌ಗೆ ಹಾಜರಾಗಿದ್ದರು. ನ್ಯಾಯಾಲಯದ ವಿಚಾರಣೆ ಮುಗಿಯುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ವಾಪಸ್ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.