ಮಂಗಳೂರು : ಕುಲಶೇಖರ ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಬಂದು  ಕೀಟಲೆ , ಹಲ್ಲೆ ನಡೆಸಿದ ಯುವಕ: ಆರೋಪಿ ಸೈಯದ್ ನಯೀಮ್ ಬಂಧನ..

ಮಂಗಳೂರು : ಕುಲಶೇಖರ ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಬಂದು ಕೀಟಲೆ , ಹಲ್ಲೆ ನಡೆಸಿದ ಯುವಕ: ಆರೋಪಿ ಸೈಯದ್ ನಯೀಮ್ ಬಂಧನ..


ಮಂಗಳೂರು : ಮಂಗಳೂರಿನ ಕುಲಶೇಖರದಲ್ಲಿ ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕೀಟಲೆ  ಮತ್ತು ಹಲ್ಲೆ ನಡೆಸಿರುವ ಬಗ್ಗೆ  ವರದಿಯಾಗಿದೆ
ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ.  ಈತ ಮಹಿಳೆಗೆ ರವಿ ಎಂಬ ಹೆಸರಿನಲ್ಲಿ ಒಂದು ವರ್ಷದ ಹಿಂದೆ ಪರಿಚಯವಾಗಿದ್ದು ಆಗಾಗ ಮಹಿಳೆ ಮನೆಗೆ ಬರುತ್ತಿದ್ದ  ಎನ್ನಲಾಗಿದೆ. ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವೂ ಇತ್ತೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಬಂದಿದ್ದ ಯುವಕ ಮಹಿಳೆ ಮತ್ತು ಮಹಿಳೆಯ ಅಕ್ಕನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಇದರಿಂದ ಮಹಿಳೆ ಮತ್ತು ಯುವಕನ ಮಧ್ಯೆ ಗಲಾಟೆ ನಡೆದಿದೆ.

 ಮಾಹಿತಿ ಪಡೆದ ಸ್ಥಳಿಯರು ಬಂದು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ವಿಚಾರಿಸಿದಾಗ ಆತನೊಬ್ಬ ಮುಸ್ಲೀಂ ಎಂದೂ ಹೆಸರು ಸೈಯದ್ ನಹೀಮ್ (25) ಶಿವಮೊಗ್ಗದವ ಎಂದು ಬಾಯ್ಬಿಟ್ಟಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿ ಸೈಯದ್ ನಹಿಮ್  ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article