ಆಟೋಗೆ ಕಾರು ತಾಗಿದ್ದಕ್ಕೆ ಗೋವಾ ಮಾಜಿ ಶಾಸಕನ ಭೀಕರ ಹತ್ಯೆ ; ಬೆಳಗಾವಿಯ ಕಿಲ್ಲರ್ ಆಟೋ ಡ್ರೈವರ್ ವಶಕ್ಕೆ , ದೃಶ್ಯ CCTVಯಲ್ಲಿ ಸೆರೆ !
Saturday, February 15, 2025
ಬೆಳಗಾವಿ, ಫೆ 15: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ ಆಟೋ ಚಾಲಕ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ (69) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಟೋ ಚಾಲಕನಿಂದ ಕ್ಷುಲ್ಲಕ ಕಾರಣಕ್ಕೆ ಹತ್ಯೆ ;
ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಆಟೋ ಚಾಲಕನೋರ್ವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಮಾಜಿ ಶಾಸಕ ಬೆಳಗಾವಿಯ ಖಡೇಬಜಾರನ ಶ್ರೀನಿವಾಸ ಲಾಡ್ಜ್ ಎದುರು ಸಾವನ್ನಪ್ಪಿದ್ದಾರೆ. ಲಾವೋ ಮಾಮಲೇದಾರ್ ಅವರು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದರು.
ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದ್ದಕ್ಕೆ ಕೃತ್ಯ
ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ ಖಡಬಝರ್ ಲಾಡ್ಜ್ ಬಳಿ ಆಟೋಗೆ ಲಾವೋ ಮಾಮಲೇದಾರ್ ಕಾರು ಟಚ್ ಆಗಿದೆ. ಈ ವಿಚಾರಕ್ಕೆ ಆಟೋ ಚಾಲಕ ಜಗಳಕ್ಕೆ ಇಳಿದಿದ್ದಾನೆ. ನಂತರ ಆಟೋ ಚಾಲಕ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಬಳಿಕ ಲಾವೋ ಮಾಮಲೇದಾರ್ ಅವರು ಶ್ರೀನಿವಾಸ ಲಾಡ್ಜ್ ಬಳಿ ಬಂದು ನಿಂತಿದ್ದಾಗ ಆಟೋ ಚಾಲಕ ಅಲ್ಲೂ ಜಗಳ ಆರಂಭಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಆಟೋ ಚಾಲಕ ಲಾವೋ ಮಾಮಲೇದಾರ್ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾನೆ. ಈ ವೇಳೆ ಅಲ್ಲಿದ್ದ ಜನ ಮತ್ತು ಲಾಡ್ಜ್ ಸಿಬ್ಬಂದಿ ಸೇರಿ ಜಗಳವನ್ನು ನಿಲ್ಲಿಸಿದ್ದಾರೆ. ಗಂಭೀರವಾಗಿ ಪೆಟ್ಟು ತಿಂದಿದ್ದ ಲಾವೋ ಮಾಮಲೇದಾರ್ ಲಾಡ್ಜ್‌ನ ಮೆಟ್ಟಿಲು ಹತ್ತುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈಗ ಲಾವೋ ಮಾಮಲೇದಾರ್ ಮೃತ ದೇಹವನ್ನು ಬೆಳಗಾವಿ ಬೀಮ್ಸ್‌ಗೆ ರವಾನೆ ಮಾಡಲಾಗಿದೆ.
ಗೋಮಾಂತಕ ಪಕ್ಷದಿಂದ 2012 ರಲ್ಲಿ ಚುನಾಯಿತರಾಗಿದ್ದ ಲಾವೋ ಜಯಗಳಿಸಿದ್ದರು. ಮಾಮಲೇದಾರ್ ಸಾವಿಗೆ ಗೋವಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದೆ.
ಇನ್ನೂ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೃತ ದೇಹ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ತಕ್ಷಣವೆ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಟೋ ಚಾಲಕನಿಂದ ಹಲ್ಲೆಯಾದ ಬಳಿಕ ಮಾಜಿ ಶಾಸಕರು ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮಾಜಿ ಶಾಸ ಲಾವೋ ಮಾಮಲೇದಾರ್ ಅವರ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಿರುವ ಹಿನ್ನೆಲೆ ಆಸ್ಪತ್ರೆಗೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆ ಸಂಬಂಧ ಆರೋಪಿ ಮುಜಾಯಿದ್ ಶಕಿಲ್ ಸನದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಿರಿಯ ಮಾಜಿ ಶಾಸಕನ ಸಾವಿನ ಹಿನ್ನೆಲೆಯಲ್ಲಿ ಗೋವಾ ಸಿಎಂ ಬೆಳಗಾವಿಗೆ ಬರುತ್ತಾ ಇದ್ದು, ಈ ಪ್ರಕರಣ ರಾಜಕೀಯದ ತಿರುವು ಪಡೆದುಕೊಳ್ಳುತ್ತಿದೆ.