ಜಯಲಲಿತಾಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಇಂದು ತಮಿಳುನಾಡಿಗೆ ಹಸ್ತಾಂತರ

ಜಯಲಲಿತಾಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಇಂದು ತಮಿಳುನಾಡಿಗೆ ಹಸ್ತಾಂತರ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸೇರಿದ ಆಸ್ತಿಯನ್ನು ತಮಿಳುನಾಡಿಗೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ.

ಜಯಲಲಿತಾಗೆ ಸೇರಿದ 7 ಕೆಜಿ ಚಿನ್ನ, 11344 ರೇಷ್ಮೆ ಸೀರೆ, 740 ದುಬಾರಿ ಚಪ್ಪಲಿ, 12 ಫ್ರಿಜ್, 10 ಟಿವಿ, 700 ಕೆಜಿ ಬೆಳ್ಳಿಯನ್ನು ತಮಿಳುನಾಡಿಗೆ ಹಸ್ತಾಂತರಿಸುವ ಪ್ರಕ್ರಿಯೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರಂಭವಾಗಿದೆ.

ಈ ಸಂಬಂಧ ಕಾನೂನು ಪ್ರಕ್ರಿಯೆ ನಡೆಯಬೇಕಿರುವ ಹಿನ್ನೆಲೆ ಕೋರ್ಟ್ ಹಸ್ತಾಂತರ ಪ್ರಕ್ರಿಯೆ ನಡೆಸುತ್ತಿದೆ. ನ್ಯಾಯಾಧೀಶರ ಸಮ್ಮುಖದಲ್ಲಿ ಜಯಲಲಿತಾಗೆ ಸೇರಿದ ವಸ್ತುಗಳನ್ನು ನೀಡಲಾಗುತ್ತಿದೆ.

ತಮಿಳುನಾಡಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಈ ಎಲ್ಲ ವಸ್ತುಗಳನ್ನು ಕೊಂಡೊಯ್ಯಲಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರಕಾರದ ಸುಪರ್ದಿಗೆ ನೀಡುವಂತೆ ವಿಶೇಷ ನ್ಯಾಯಾಲಯವು ಆದೇಶಿಸಿತ್ತು.

Ads on article

Advertise in articles 1

advertising articles 2

Advertise under the article