ಉಡುಪಿ :ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ! ಮಾರಿಗುಡಿಯ ನಿರ್ಮಾಣ, ಮರದ ಕೆತ್ತನೆ, ಚಿನ್ನದ ಗದ್ದಿಗೆ ಕಂಡು ಸಂತಸ ವ್ಯಕ್ತಪಡಿಸಿದ ನಟಿ.marigudi temple actress shilpashetty visit
Friday, February 28, 2025
ಹೊಸದಾಗಿ ಜೀರ್ಣೋದ್ದಾರಿಗೊಂಡ ಕಾಪುವಿನ ಹೊಸ ಮಾರಿಗುಡಿಗೆ ನಟಿ ಶಿಲ್ಪಾಶೆಟ್ಟಿ ತನ್ನ ತಾಯಿ ತಂಗಿ ಮತ್ತು ಮಕ್ಕಳ ಜೊತೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕಾಪುವಿನಲ್ಲಿ ಹತ್ತು ದಿನಗಳ ಕಾಲ ಅದ್ಧೂರಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಹೊಸ ಮಾರಿಗುಡಿ ನೂತನ ದೇವಸ್ಥಾನದ ವೀಕ್ಷಣೆ ಮಾಡಿದ ಶಿಲ್ಪಾ ಶೆಟ್ಟಿ ಖುಷಿಗೊಂಡರು. ಮಾರಿಗುಡಿಯ ನಿರ್ಮಾಣ, ಮರದ ಕೆತ್ತನೆ, ಚಿನ್ನದ ಗದ್ದಿಗೆ ಕಂಡು ನಟಿ ಸಂತಸ ವ್ಯಕ್ತಪಡಿಸಿದರು.
ದೇಗುಲದ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪನಾ ಮಂಡಳಿಯಿಂದ ಶಿಲ್ಪಾ ಶೆಟ್ಟಿಗೆ ಗೌರವ ಸಲ್ಲಿಸಲಾಯಿತು. ತಂಗಿ ಶಮಿತಾ ಶೆಟ್ಟಿ, ತಾಯಿ ಮತ್ತು ಅವರ ಕುಟುಂಬದ ಜೊತೆ ಬಾಲಾಲಯದಲ್ಲಿರುವ ಮಾರಿಯಮ್ಮನ ದರ್ಶನ ಮಾಡಿ ಪ್ರಸಾದ ಸ್ವೀಕಾರ ಮಾಡಿದ್ದಾರೆ