ಚಿಕ್ಕಬಳ್ಳಾಪುರ: ಕಲುಷಿತ ನೀರು ಸೇವನೆ;ಓರ್ವ ಸಾವು, 20ಕ್ಕೂ ಹೆಚ್ಚು ಜನರು ಅಸ್ವಸ್ಥ.!
Saturday, March 15, 2025
ಚಿಕ್ಕಬಳ್ಳಾಪುರ: ಕಲುಷಿತ ನೀರು ಸೇವಿಸಿ ವೃದ್ಧರೊಬ್ಬರು ಸಾವನ್ನಪಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೆ.ಕುರುಬರಹಳ್ಳಿ ಹಾಗೂ ಚಿಕ್ಕಪೈಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.
ವಾಂತಿ, ಭೇದಿಯಿಂದ ಬಳಲುತ್ತಿದ್ದ ಕೆ.ಕುರುಬರಹಳ್ಳಿಯ ಸಿದ್ದಪ್ಪ (67) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಗ್ರಾಮದ 20ಕ್ಕೂ ಹೆಚ್ಚು ಜನರು ಕಲುಷಿತ ನೀರಿನಿಂದ ಅನಾರೋಗ್ಯಕ್ಕೀಡಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆ.ಕುರುಬರಹಳ್ಳಿ ಹಾಗೂ ಚಿಕ್ಕಪೈಯಲಗುರ್ಕಿ ಗ್ರಾಮಗಳಲ್ಲಿ ಕಲುಷಿತ ನೀರು ಪೂರೈಕೆಯಾಗಿದ್ದು, ಗ್ರಾಮಸ್ಥರು ಅಸ್ವಸ್ಥರಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.