ಬೆಂಗಳೂರು :ಆರೋಗ್ಯ ಇಲಾಖೆಯಿಂದ ಎಮರ್ಜನ್ಸಿ ಗೈಡ್ಲೈನ್ಸ್; ಜನರೇ ಅಲರ್ಟ್ ಆಗಿರಿ ..!ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗ ಸೂಚಿ;ಬಿಡುಗಡೆಮಾರ್ಚ್‌ನಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಲಿದೆ; ತಾಪಮಾನಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ!!
Sunday, March 2, 2025
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ಮುಂದೆ ರಣ ಬಿಸಿಲಿನ ಆರ್ಭಟ ಮುಂದುವರಿಯಲಿದೆ. ಮುಂದಿನ 4 ದಿನಗಳ ಕಾಲ ಬೆಂಗಳೂರಲ್ಲಿ ಭಾರೀ ಬಿಸಿಲು ಇರಲಿದೆ. ಅದರಿಂದ ಪಾರಾಗಲು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಚ್‌ನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಆರೋಗ್ಯ ಕಾಪಡಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕಾರವಾರ ಹಾಗೂ ಕರಾವಳಿ ಭಾಗದಲ್ಲಿ 40 ರಿಂದ 42 ಡಿಗ್ರಿ ಸೆಲ್ಸಿಯಸ್ವರೆಗೂ ಗರಿಷ್ಟ ಉಷ್ಣಾಂಶ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ಗರಿಷ್ಟ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಸಾಧ್ಯತೆ ಇದೆ.
ಗೈಡ್ಲೈನ್ಸ್
- ಹೆಚ್ಚು ನೀರು ಕುಡಿಯುವುದು
- ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಸೇವಿಸಬೇಕು
- ಪ್ರಯಾಣ ಮಾಡುವ ಸಮಯದಲ್ಲೂ ಕುಡಿಯಲು ನೀರು ಒಯ್ಯಬೇಕು
- ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್ ಸೇವಿಸಬೇಕು
- ನೀರಿನ ಅಂಶ ಹೊಂದಿರುವ ಹಣ್ಣು, ತರಕಾರಿ ಸೇವಿಸುವುದು
- ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು
- ತಿಳಿ ಬಣ್ಣದ, ಅಳಕವಾದ ಹತ್ತಿಯ ಬಟ್ಟೆ ಧರಿಸುವುದು
- ಹೊರ ಹೋಗುವಾಗ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಬಳಸುವುದು
- ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಿ
- ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿ ಪಡೆದು ಅದರಂತೆ ಚಟುವಟಿಕೆ ಯೋಜಿಸುವುದು
- ಸಾಧ್ಯವಾದಷ್ಟು ಒಳಾಂಗಣದಲ್ಲಿರಿ
- ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ
- ನೇರವಾಗಿ ಸೂರ್ಯನ ಬೆಳಕು, ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಿರಿ
- ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿಡಿ
- ಹಾಗೂ ತಣ್ಣನೆಯ ಗಾಳಿಯ ಸಂಚಾರಕ್ಕೆ ಅನುಕೂಲ ಆಗುವಂತೆ, ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆದಿಡಬೇಕು
- ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ, ಹೊರಾಂಗಣ ಚಟುವಟಿಕೆಗಳನ್ನು ಆದಷ್ಟು ದಿನದ ತಣ್ಣನೆಯ ಸಮಯದಲ್ಲೂ ಅಂದರೆ ಬೆಳಗಿನ ಹೊತ್ತು ಅಥವ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ
- ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಚಟುವಟಿಕೆಗಳು ಪೂರ್ವಾಹ್ನ 11 ಗಂಟೆಯ ಒಳಗೆ ಮುಕ್ತಾಯಗೊಳಿಸುವುದು ಉತ್ತಮ
- ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು / ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್‌ನ ವ್ಯವಸ್ಥೆ ಮಾಡುವುದು
- ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು
- ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಡ್ಡಾಯವಾಗಿ ಮಾಡುವುದು
*ಏನೆಲ್ಲ ಮಾಡಬಾರದು..?
- ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರ ಹೋಗೋದನ್ನು ತಪ್ಪಿಸಬೇಕು
- ಮಧ್ಯಾಹ್ನದದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆ ಕೈಗೊಳ್ಳಬಾರದು
- ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸ ತಪ್ಪಿಸಿ
- ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ
- ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲು ತೆರೆದಿಡಿ
- ಮಧ್ಯಪಾನ, ಟೀ , ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು
- ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ
- ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ/ ಹೊಟ್ಟೆ ನೋವು ಉಂಟುಮಾಡುತ್ತವೆ
- ಹೆಚ್ಚು ಪ್ರೋಟಿನ್ ಭರಿತ ಹಾಗೂ ಹಳೆಯದಾದ ಆಹಾರ ಪದಾರ್ಥ ಸೇವಿಸಬೇಡಿ
- ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ
- ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನ ಅಪಾಯಕಾರಿ