ಬೆಂಗಳೂರು : ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರಿಕೆ: ಇಂದು ಒಂದೇ ಸಲಕ್ಕೆ 400 ರೂ ಹೆಚ್ಚಳ..!!!!!
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಏರಿಕೆ ಮುಂದುವರಿದಿದೆ. ಎರಡೂ ಬೆಲೆಗಳು ಹೊಸ ದಾಖಲೆ ಮಾಡಿವೆ. ಚಿನ್ನದ ಬೆಲೆ ಭಾರತದಲ್ಲಿ ಮೊದಲ ಬಾರಿಗೆ 8,300 ರೂ ಗಡಿ ದಾಟಿದೆ.
ಬೆಂಗಳೂರಿನಲ್ಲಿ ಇದರ ಬೆಲೆ 8,290 ರೂ ಮುಟ್ಟಿದೆ. ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. ಕೆಲವೆಡೆ ಬೆಲೆ 8,200 ರೂ ಗಡಿ ದಾಟಿದೆ. ಬೆಳ್ಳಿ ಬೆಲೆಯೂ ಏರಿಕೆಯಾಗುವುದು ಮುಂದುವರಿದಿದೆ. ನಿನ್ನೆಯಂತೆ ಇಂದೂ ಕೂಡ ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 82,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 90,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 82,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,500 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 19ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,440 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,830 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,440 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ