ಬೆಂಗಳೂರು : ಎಲ್ಲ ರಾಜ್ಯ ರಾಜಧಾನಿಗಳಲ್ಲಿ ತಿರುಪತಿ ದೇಗುಲ: ಸಿಎಂ ನಾಯ್ಡು ಘೋಷಣೆ
ತಿರುಮಲ: ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.
ವಿದೇಶಗಳಲ್ಲಿಯೂ ವೆಂಕಟೇಶ್ವರನ ದೇವಾಲಯ ಸ್ಥಾಪನೆಯಾಗಲಿ ಎಂದು ಅನೇಕ ಭಕ್ತರು ಬಯಸುತ್ತಿದ್ದಾರೆ. ಸದ್ಯಕ್ಕೆ ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ದೇಗುಲ ನಿರ್ಮಿಸಲಾಗುವುದು ಎಂದರು.
ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಕ್ಷೇತ್ರ ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಪುನರುಚ್ಚರಿಸಿದ ಅವರು, ಸದ್ಯ ಅಲ್ಲಿ ಇತರ ಸಮುದಾಯದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ನಾಯ್ಡು ಶುಕ್ರವಾರ ಹೇಳಿದ್ದಾರೆ.
ಸೆವೆನ್ ಹಿಲ್ಸ್ ಪ್ರದೇಶದ ಬಳಿಯ ವಾಣಿಜ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದ ನಾಯ್ಡು, ಈ ಪ್ರದೇಶಕ್ಕೆ ಹೊಂದಿಕೊಂಡಿರುವ ಮುಮ್ತಾಜ್ ಹೋಟೆಲ್‌ಗೆ ಈ ಹಿಂದೆ ಅನುಮತಿ ನೀಡಲಾಗಿತ್ತು. ಆದರೆ, ಇದೀಗ 35.32 ಎಕರೆ ಜಾಗದಲ್ಲಿ ಹೋಟೆಲ್ ನಿರ್ಮಾಣಕ್ಕೆ ಮಂಜೂರಾತಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.