ನವದೆಹಲಿ :ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ :ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಹುಟ್ಟಿದ ದಿನ ಏ.14ರಂದು ಅದ್ದೂರಿಯಾಗಿ ಆಚರಿಸಲು ಈಗಾಗಲೇ ಎಲ್ಲ ಕಡೆ ಪೂರ್ವ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ.

ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಸಾರ್ವತ್ರಿಕ ಘೋಷಿಸಿ, ಪ್ರಕಟಣೆ ಹೊರಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, “ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದವರು, ನಮ್ಮ ಗೌರವಾನ್ವಿತ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ದಿನಾಚರಣೆಯಂದು ಈಗ ಸಾರ್ವಜನಿಕ ರಜಾದಿನವನ್ನು ಆಚರಿಸಲಾಗುವುದು” ಎಂದು ಹೇಳಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸೋಮವಾರ ಅಂದರೆ, ಏಪ್ರಿಲ್ 14 ರಂದು ರಜೆ ಘೋಷಿಸಲು ನಿರ್ಧರಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು/ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ.

Ads on article

Advertise in articles 1

advertising articles 2

Advertise under the article