ಯಾದಗಿರಿ :ಹಾಡಹಗಲೇ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು; ಮಾರಕಸ್ತ್ರ ಗಳಿಂದ ಕೊಚ್ಚಿ ಇಬ್ಬರ ಕೊಲೆ.
Sunday, March 16, 2025
ಯಾದಗಿರಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಹತ್ಯೆ ಮಾಡಲಾಗಿದೆ.
ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಇಬ್ಬರನ್ನು ಕೊಲೆ ಮಾಡಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ನಡೆದಿದೆ.
ಮಾಪಣ್ಣ(52) ಅಲಿಸಾಬ(55) ಕೊಲೆಯಾದವರು. ಇಬ್ಬರು ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್ ಮೇಲೆ ಶಹಾಪುರಕ್ಕೆ ಬಂದಿದ್ದರು.
ಹೇರ್ ಕಟಿಂಗ್ ಮಾಡಿಸಿಕೊಂಡು ತರಕಾರಿ ತೆಗೆದುಕೊಂಡು ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ಈ ವೇಳೆ ಶಹಾಪುರದಿಂದ ಸ್ವಗ್ರಾಮ ಮದ್ದರಕಿಗೆ ತೆರಳುವಾಗ ಮಾರ್ಗ ಮಧ್ಯೆ ಸಾದ್ಯಾಪುರ ಬಳಿ ಬೈಕ್ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.
ತಲೆ, ಬೆನ್ನು, ಎಡಗೈಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಹಾಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊಲೆ ಆರೋಪಿಗಳು ಪರಾರಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.