ಮಂಗಳೂರು :ರಾಜ್ಯದ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ ಹಚ್ಚಿದ ಸಿ ಸಿ ಬಿ ಪೊಲೀಸ್ ಪಡೆ ; ಮಂಗಳೂರು ಪೊಲೀಸರ ಕಾರ್ಯ ವೈಖರಿ ಶ್ಲಾಘನೀಯ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ಬಹುದೊಡ್ಡ ಅಪಾಯ ತಪ್ಪಿಸಿದ ಪೊಲೀಸರು ಎಂದು ಟ್ವೀಟ್

ಮಂಗಳೂರು :ರಾಜ್ಯದ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ ಹಚ್ಚಿದ ಸಿ ಸಿ ಬಿ ಪೊಲೀಸ್ ಪಡೆ ; ಮಂಗಳೂರು ಪೊಲೀಸರ ಕಾರ್ಯ ವೈಖರಿ ಶ್ಲಾಘನೀಯ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ಬಹುದೊಡ್ಡ ಅಪಾಯ ತಪ್ಪಿಸಿದ ಪೊಲೀಸರು ಎಂದು ಟ್ವೀಟ್


ಮಂಗಳೂರು : ರಾಜ್ಯದಲ್ಲೇ ಅತಿದೊಡ್ಡ ಮಟ್ಟದ ಡ್ರಗ್ಸ್ ಬೇಟೆಯಾಡಿರುವ ಮಂಗಳೂರು ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 


ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ. 

ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕ ದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ. 

ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನೇತೃತ್ವದ ಪೊಲೀಸರ ಬಗ್ಗೆ ಪ್ರಶಂಸೆ ತೋರಿದ್ದಾರೆ. 
ಮಂಗಳೂರು ಸಿಸಿಬಿ ಪೊಲೀಸರು ದೆಹಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದು ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಪ್ರಜೆಗಳನ್ನು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article