ಉಡುಪಿ : ಕಾಪು ಮಾರಿಯಮ್ಮ ದೇವಿ ದರ್ಶನ ಪಡೆದ ನಟಿ ಕಂಗನ ರಾಣಾವತ್ ; ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಂಧರ್ಭದಲ್ಲಿ ಭಾಗಿ.
Tuesday, March 4, 2025

ಉಡುಪಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಅವರಿಗೆ ಶಾಲು ಹೊದಿಸಿ ಸ್ವಾಗತಿಸಲಾಯಿತು.
ದೇವರ ದರ್ಶನದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದರು.


ದಕ್ಷಿಣಕನ್ನಡ ಸಂಸದ ಬೃಜೇಶ್ ಚೌಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ದಾನಿ ಬಂಜಾರ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.
ಇತ್ತೀಚೆಗೆ ಕಂಗನಾ ರಣಾವತ್ ಅವರ ಸುದೀರ್ಘ ಮಾನನಷ್ಟ ಮೊಕದ್ದಮೆಯೊಂದು ರಾಜೀ ಪಂಚಾಯಿತಿ ಮೂಲಕ ಕೊನೆಗೊಂಡಿತ್ತು. ಇದರ ಬೆನ್ನಲ್ಲೇ ದೇವಸ್ಥಾನ ದರ್ಶನದಲ್ಲಿ ಕಂಗನಾ ಬ್ಯೂಸಿಯಾಗಿದ್ದಾರೆ.