ಬೆಂಗಳೂರು: ಕರ್ನಾಟಕ ಬಂದ್‌ ಕರೆ ; ಬೆಂಗಳೂರಿನಲ್ಲಿ ಓಲಾ, ಉಬರ್ ಸೇವೆ ವ್ಯತ್ಯಯ, ಸರ್ಕಾರಿ ಸಾರಿಗೆ, ಕಚೇರಿ, ಶಾಲೆ, ಕಾಲೇಜು ರಜೆ ಇದೆಯೇ? ಏನಿರುತ್ತೆ? ಏನಿರಲ್ಲ? ರಸ್ತೆ ಬಂದ್ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ..!!!

ಬೆಂಗಳೂರು: ಕರ್ನಾಟಕ ಬಂದ್‌ ಕರೆ ; ಬೆಂಗಳೂರಿನಲ್ಲಿ ಓಲಾ, ಉಬರ್ ಸೇವೆ ವ್ಯತ್ಯಯ, ಸರ್ಕಾರಿ ಸಾರಿಗೆ, ಕಚೇರಿ, ಶಾಲೆ, ಕಾಲೇಜು ರಜೆ ಇದೆಯೇ? ಏನಿರುತ್ತೆ? ಏನಿರಲ್ಲ? ರಸ್ತೆ ಬಂದ್ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ..!!!


ಬೆಂಗಳೂರು : ಮರಾಠಿಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಾ.22ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್​ ಕರೆ ನೀಡಿದ್ದು ಅದರಂತೆ ನಾಳೆ ಅಂದರೆ ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದೆ. ಬೆಂಗಳೂರಿನಲ್ಲಿ ಬಹುತೇಕ ಬಂದ್ ಗೆ ಬೆಂಬಲ ಸಿಗುವ ಸಾಧ್ಯತೆ ಹೆಚ್ಚಿದೆ. 

ಏನಿರುತ್ತೆ, ಏನಿರಲ್ಲ ?

  • ಸರ್ಕಾರ ಬೆಂಬಲ ನೀಡದ ಹಿನ್ನೆಲೆ ಶಾಲಾ - ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಾರಿಗೆ ಬಸ್‌ಗಳು ಎಂದಿನಂತೆ ಸಂಚಾರ ನಡೆಸಲಿವೆ.
  • ಆ್ಯಂಬುಲೆನ್ಸ್ , ಹೋಲ್ ಸೆಲ್ ಬಟ್ಟೆ ಅಂಗಡಿಗಳು, ಇನ್ನಿತರ ಅಗತ್ಯ ಸೇವೆಗಳು ಇರಲಿವೆ
  • ತರಕಾರಿ, ಹೂ, ಹಣ್ಣುಗಳು, ಸೂಪರ್ ಮಾರ್ಕೆಟ್, ಹೋಟೆಲ್ ಗಳು ಓಪನ್ ಇರಲಿದೆ
  • BMTC-KSRTC, ಮೆಟ್ರೋ ಸಂಚಾರ, ರೈಲು ಓಡಾಡಲಿವೆ
  • ಖಾಸಗಿ ಬಸ್, ಶಾಲಾ ವಾಹನ ಓಡಾಟ ಇರಲಿದೆ.
  • ಬಾರ್ ಗಳು ತೆರೆದಿರಲಿದ್ದು, ಏರ್ ಪೋರ್ಟ್ ಟ್ಯಾಕ್ಸಿ ಸೇವೆ ಇರಲಿದೆ
  • ಶೇಕಡ 65ರಷ್ಟು ಆಟೋಗಳ ಸೇವೆ ಇರಲಿದೆ
  • ಥಿಯೇಟರ್ ಗಳು ಮಧ್ಯಾಹ್ನ ತನಕ ಬಂದ್
  • ಶೇಕಡ 35ರಷ್ಟು ಆಟೋ ಸೇವೆಯಲ್ಲಿ ತುಸು ವ್ಯತ್ಯಯ
  • ಗೂಡ್ಸ್ ವಾಹನಗಳ ಸೇವೆಯಲ್ಲಿ ವ್ಯತ್ಯಯ
  • ಓಲಾ-ಊಬರ್ ಸೇವೆಯಲ್ಲಿ ವ್ಯತ್ಯಯ
  • ನೈತಿಕ ಬೆಂಬಲ, ಮುಷ್ಕರಕ್ಕಿಲ್ಲ 

BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ.

ಬಂದ್ ಗೆ ಸಂಪೂರ್ಣ ಬೆಂಬಲ

ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ

ಇನ್ನು ಫ್ರೀಡಂ ಪಾರ್ಕ್ ಹೊರತು ಪಡಿಸಿ, ನಗರದ ಉಳಿದ ಕಡೆಗಳಲ್ಲಿ ಸಾರ್ವಜನಿಕ ಸಂಚಾರ ಹಾಗೂ ನೆಮ್ಮದಿಗೆ ಭಂಗವಾಗುವಂತೆ ಪ್ರತಿಭಟನೆ, ಮುಷ್ಕರ, ಮೆರವಣಿಗೆ ಮಾಡುವಂತಿಲ್ಲ. ಈ ಕುರಿತು ಹೈಕೋರ್ಟ್ ಆದೇಶ ನೀಡಿದೆ‌. ಒಂದು ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದರೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಸಂಘ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article