ಬೆಂಗಳೂರು :ಬ್ರಿಟಿಷ್ ಕಾಲದ ಟೋಪಿಗೆ ಬೀಳಲಿದೆ ಬ್ರೇಕ್; ಇನ್ಮುಂದೆ ಕರ್ನಾಟಕ ಪೊಲೀಸರ ತಲೆಯನ್ನು ಅಲಂಕರಿಸಲಿದೆ  ‘ಸ್ಮಾರ್ಟ್ ಪೀಕ್ ಹ್ಯಾಟ್’

ಬೆಂಗಳೂರು :ಬ್ರಿಟಿಷ್ ಕಾಲದ ಟೋಪಿಗೆ ಬೀಳಲಿದೆ ಬ್ರೇಕ್; ಇನ್ಮುಂದೆ ಕರ್ನಾಟಕ ಪೊಲೀಸರ ತಲೆಯನ್ನು ಅಲಂಕರಿಸಲಿದೆ ‘ಸ್ಮಾರ್ಟ್ ಪೀಕ್ ಹ್ಯಾಟ್’

ಬೆಂಗಳೂರು : ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸರು ಬ್ರಿಟಿಷರ ಕಾಲದ ಟೋಪಿಗಳನ್ನೇ ಬಳಸುತ್ತಿದ್ದಾರೆ. ಈ ಒಂದು ಟೋಪಿ ಬದಲಾವಣೆಗಾಗಿ ಮೊದಲಿನಿಂದಲೂ ಕೂಗು ಕೇಳಿ ಬಂದಿತ್ತು. ಆದರೆ ಇದೀಗ ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ.

ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.
ಪ್ರಸ್ತುತ ಪೊಲೀಸ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಗ್ಲೋಚ್ ಟೋಪಿಯಿಂದಾಗಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಇನ್ನು ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳಿಗೆ ಪೀಕ್ ಕ್ಯಾಪ್‌ಗಳನ್ನು ನೀಡಲಾಗಿದೆ. ಸದ್ಯ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ನೀಡುವ ಕುರಿತಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಸೂಚಿಸಿದ್ದಾರೆ.

ಆಗಾಗ ಈ ಬಗ್ಗೆ ಚರ್ಚೆಯಾಗುತ್ತಿದ್ದರು ಅನುಷ್ಠಾನಕ್ಕೆ ಬಂದಿರಲಿಲ್ಲ. ಇದೀಗ ಡಿಜಿ-ಐಜಿಪಿ ಸೂಚನೆ ಬೆನ್ನಲ್ಲೇ ಪೀಕ್ ಟೋಪಿ ವಿತರಣೆ ಬಗ್ಗೆ ಚರ್ಚಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್ಆರ್ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಏಪ್ರಿಲ್ 4ರಂದು ಕಿಟ್ ನಿರ್ದಿಷ್ಟತಾ ಸಮಿತಿ ಸಭೆ ಕರೆಯಲಾಗಿದೆ‌ ಎಂದು ಮೂಲಗಳು ತಿಳಿಸಿವೆ.

Ads on article

Advertise in articles 1

advertising articles 2

Advertise under the article