ಬೆಂಗಳೂರು :ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ಬಾಲಮಂದಿರ ಆರಂಭ

ಬೆಂಗಳೂರು :ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ಬಾಲಮಂದಿರ ಆರಂಭ

ಬೆಂಗಳೂರು: ಮಿಷನ್ ವಾತ್ಸಲ್ಯ ಯೋಜನೆಯಡಿ ರಕ್ಷಣೆ ಮತ್ತು ಪೋಷಣೆ ಅಗತ್ಯವಿರುವ ಲಿಂಗತ್ವ ಅಲ್ಪಸಂಖ್ಯಾತ ಮಕ್ಕಳಿಗಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಎರಡು ಬಾಲ ಮಂದಿರಗಳನ್ನು ಆರಂಭಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಅಧ್ಯಕ್ಷ ಜಿ.ಜಗದೀಶ್ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಸಂರಕ್ಷಣೆ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಬಾಲ ಮಂದಿರ ಆರಂಭಿಸಲಾಗಿದೆ. ಪಾಲನೆ ಮತ್ತು ಪೋಷಣೆ ಹಾಗೂ ಪುನರ್ವಸತಿ ಅವಶ್ಯಕತೆ ಇರುವ ಮಕ್ಕಳನ್ನು ಸೇರಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಎಂ.ಹೆಚ್. ಮರಿಗೌಡ ರಸ್ತೆಯಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080 29523458 ಸಂಪರ್ಕಿಸಬಹುದಾಗಿದೆ.

Ads on article

Advertise in articles 1

advertising articles 2

Advertise under the article