ಬೆಂಗಳೂರು :ಪೋಕ್ಸೋ ಕೇಸ್ ಸಮನ್ಸ್ಗೆ ತಡೆ ನೀಡಿದ ಹೈಕೋರ್ಟ್,  ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪರಿಗೆ ರಿಲೀಫ್!!

ಬೆಂಗಳೂರು :ಪೋಕ್ಸೋ ಕೇಸ್ ಸಮನ್ಸ್ಗೆ ತಡೆ ನೀಡಿದ ಹೈಕೋರ್ಟ್, ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪರಿಗೆ ರಿಲೀಫ್!!

ಬೆಂಗಳೂರು : ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ಅದೇ ರೀತಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೂ ಹೈಕೋರ್ಟ್ ತಡೆ ನೀಡಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ವೈಗೆ ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ನೀಡಿತ್ತು. ಸಮನ್ಸ್ ಪ್ರಶ್ನಿಸಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ಹಿನ್ನೆಲೆ

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

Ads on article

Advertise in articles 1

advertising articles 2

Advertise under the article