ಗುಜರಾತ್ :ಪಟಾಕಿ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅನಾಹುತ; 17 ಮಂದಿ ಮೃತ್ಯು
Wednesday, April 2, 2025
ಗುಜರಾತ್: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟದಿಂದ ಅಗ್ನಿ ಅನಾಹುತ ಸಂಭವಿಸಿದ್ದು, 17 ಕಾರ್ಮಿಕರು ಸಾವನ್ನಪ್ಪಿದ್ದು , 3 ಜನ ಗಾಯಗೊಂಡಘಟನೆ ಬನಸ್ಕಾಂತ ಜಿಲ್ಲೆಯ ದೀಸಾ ನಗರದಲ್ಲಿ ನಡೆದಿದೆ.
ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ನಂತರ, ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಾರಂಭಿಸಿದರು. ಬೆಂಕಿಯಿಂದಾಗಿ ಕಾರ್ಖಾನೆಯ ಮೊದಲ ಮಹಡಿ ಕುಸಿದು ಬಿದ್ದಿದೆ. ಅನೇಕ ಮಂದಿ ಇದರ ಅಡಿ ಸಿಲುಕಿದ್ದಾರೆ.