ನವದೆಹಲಿ: ಜಾರ್ಖಂಡ್ ನಲ್ಲಿ ಗುಂಡಿನ ಚಕಮಕಿ; 4 ನಕ್ಸಲರನ್ನು ಗುಂಡಿಕ್ಕಿ ಕೊಂದ ಕೇಂದ್ರ ಮೀಸಲು ಪೊಲೀಸ್ ಪಡೆ.
Sunday, April 20, 2025

ನವದೆಹಲಿ: ಜಾರ್ಖಂಡ್ ನ ಬೊಕಾರೊ ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟಗಳಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಸೋಮವಾರ ರಾಜ್ಯ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಗುಂಡಿಕ್ಕಿ ಕೊಂದಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಲಾಲ್ಪನಿಯಾ ಪ್ರದೇಶದ ಲುಗು ಪರ್ವತ ಪ್ರದೇಶದಲ್ಲಿ ಉಗ್ರರು ಅವಿತಿರುವ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಧಾವಿಸಿತ್ತು.
ಉಗ್ರರಿಂದ ಎರಡು ಇನ್‌ಸಾಸ್ ರೈಫಲ್, ಒಂದು ಎಲ್‌ಎಲ್‌ಆರ್ ರೈಫಲ್, ಒಂದು ಪಿಸ್ಟಲ್ ಸೇರಿದಂತೆ ಸಾಕಷ್ಟು ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗುಂಡಿನ ಚಕಮಕಿ ಇನ್ನೂ ಮುಂದುವರೆದಿದ್ದು, ಕಾರ್ಯಾಚರಣೆ ಚಾಲ್ತಿಯಲ್ಲಿದೆ ಎಂದು ಸಿಪಿಆರ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ.