ಕಾಶ್ಮೀರ: ಪಹಲ್ ಗಾಮ್‌ನಲ್ಲಿ ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ.

ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ನಂತರ ಭಾರತದ ಸೇನೆ ಮಹತ್ವದ ಕಾರ್ಯಚರಣೆಯನ್ನು ನಡೆಸುತ್ತಿದೆ.
ಇದೀಗ ಭಾರತದ ಸೇನೆ ಪಾಕ್ ಉಗ್ರರಿಗೆ ಒಂದರಂತೆ ಹೊಡೆತವನ್ನು ನೀಡುತ್ತಿದೆ. ಬಹುದೊಡ್ಡ ಕಾರ್ಯಚರಣೆಯನ್ನು ಸೇನೆ ಮಾಡುತ್ತಿದೆ. ಉಗ್ರರರು ನೆಲೆಸಿರುವ ಪ್ರದೇಶಕ್ಕೆ ನುಗ್ಗಿ ಭಾರತೀಯ ಸೇನೆ ಹೊಡೆಯುತ್ತಿದೆ. ನೆನ್ನೆ (ಏ.25) ಪಹಲ್ಗಾಮ್ ಶಂಕಿತ ದಾಳಿಕೋರ ಆಸಿಫ್ ಶೇಖ್ ಮನೆ ನಾಶವಾಗಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ.
ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ, ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ. ಈತ ಕಳೆದ ಮೂರ್ನಾಲ್ಕು ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತುದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಎಂದು ಹೇಳಲಾಗಿದೆ. ಕುಲ್ಗಾಮ್‌ನ ಮಾತಲಂ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕ ಜಾಹಿದ್ ಅಹ್ಮದ್‌ನ ಮತ್ತೊಂದು ಮನೆಯನ್ನು ಕೆಡವಲಾಯಿತು.