ಉತ್ತರ ಪ್ರದೇಶ :ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿ, ಇಬ್ಬರಿಗೆ ಗಾಯ.
ಉತ್ತರ ಪ್ರದೇಶ: ಕಾರೊಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿರುವ ಭೀಕರ ಅಪಘಾತ ಖುಷಿನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಪದ್ರೌನಾ-ನೌರಂಗಿಯಾ ರಸ್ತೆಯ ಶುಕ್ಲಾ ಭುಜೌಲಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಭಾನುವಾರ ತಡರಾತ್ರಿ ದೇವಗಾಂವ್ ಗ್ರಾಮದಲ್ಲಿ ನಡೆಯಬೇಕಿದ್ದ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ನಡೆದಿದೆ ಎಂದು ಅವರು ಮಾಹಿತಿ ನೀಡಿದರು.
ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಯುಪಿ 32 ಜೆಸಿ 6660 ಸಂಖ್ಯೆಯ ಕಾರಿನಲ್ಲಿ 8 ಜನರು ಪದ್ರೌನಾದಿಂದ ಪಿಪ್ರಾಗೆ ಪ್ರಯಾಣಿಸುತ್ತಿದ್ದರು. ನಂತರ ಇದ್ದಕ್ಕಿದ್ದಂತೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ ಕಾರು ಸಹ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರ ಎಂಟು ಜನರು ಒಳಗೆ ಸಿಲುಕಿಕೊಂಡಿದ್ದರು. ಸ್ಥಳೀಯ ಜನರು ಮತ್ತು ಪೊಲೀಸರು ಗ್ಯಾಸ್ ಕಟ್ಟರ್ ಯಂತ್ರದೊಂದಿಗೆ ಒಂದು ಗಂಟೆಯ ಶ್ರಮದ ನಂತರ ಕಾರಿನಿಂದ ವಿರೂಪಗೊಂಡ ಶವಗಳನ್ನು ಹೊರತೆಗೆದರು. ಮೃತದೇಹ ಮತ್ತು ಗಾಯಾಳುಗಳನ್ನು ಹೀಗೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ 6 ಜನರು ಅಸುನೀಗಿದರು. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಆಗಮಿಸಿ, ಗಾಯಾಳುಗಳನ್ನು ಭೇಟಿ ಮಾಡಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು. ಗಾಯಾಳುಗಳ ಗುರುತು ಪತ್ತೆ ಮಾಡಬೇಕಿದೆ ಎಂದು ತಿಳಿಸಿದರು.