ಆಂಧ್ರಪ್ರದೇಶ: ಉತ್ಸವದ ವೇಳೆ ಗೋಡೆ ಕುಸಿದು 8 ಭಕ್ತರು ಸಾವು : ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.
Tuesday, April 29, 2025

ನವದೆಹಲಿ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಕುಸಿದು , ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.