ಬೆಳ್ತಂಗಡಿ :ಕೊನೆಗೂ ಪತ್ತೆಯಾದ ಬೆಳಾಲು ಕಾಡಿನಲ್ಲಿ ಸಿಕ್ಕ ಮಗುವಿನ ಪೋಷಕರು; ಮಗುವನ್ನು ಕಾಡಿನಲ್ಲಿ ಬಿಡಲು ಕಾರಣವೇನು??..
Thursday, April 3, 2025
ಬೆಳಾಲು :ಅಪರಿಚಿತ ಹೆಣ್ಣು ಮಗು ಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕಾರ್ಯಾಚರಣೆಗಿಳಿದ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರಾ ಮತ್ತು ತಂಡಕ್ಕೆ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದು, ಎಪ್ರಿಲ್ 2 ರಂದು ರಾತ್ರಿ ಮಗುವಿನ ತಂದೆ ಬೆಳಾಲು ನಿವಾಸಿ ರಂಜಿತ್ ಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳನ್ನು ಪತ್ತೆ ಹಚ್ವುತ್ತಿದ್ದಂತೆಯೇ ಇದೀಗ ಇಬ್ಬರು ಕೂಡ ಸ್ವಇಚ್ಛೆಯಿಂದ ಒಂದು ವಾರದೊಳಗೆ ಮದುವೆಯಾಗುವುದಾಗಿ ಪೋಲಿಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಮುಂದೆ ಇಬ್ಬರ ಕುಟುಂಬಸ್ಥರು ಒಪ್ಪಿರುವುದಾಗಿ ತಿಳಿದು ಬಂದಿದೆ.
ರಂಜಿತ್ ಮತ್ತು ಸುಶ್ಮೀತಾ ಪರಸ್ಪರ ಪ್ರೀತಿಸುತ್ತಿದ್ದು, ಈ ವಿಚಾರ ಎರಡು ಮನೆಯವರಿಗೂ ತಿಳಿದಿರಲಿಲ್ಲ ಎನ್ನಲಾಗಿದೆ. ಈ ಮಧ್ಯೆ ಸುಶ್ಮಿತಾ ಗರ್ಭಿಣಿಯಾಗಿದ್ದು, ರಂಜಿತ್ ಸುಶ್ಮಿತಾಗೆ ಬಾಡಿಗೆ ಮನೆ ಮಾಡಿಕೊಟ್ಟಿದ್ದು, ಯಾರಿಗೂ ತಿಳಿಯದಂತೆ ಮಗುವನ್ನು ಹೆತ್ತಿದ್ದರು. ಮದುವೆಯಾಗದ ಕಾರಣ ಕುಟುಂಬದವರಿಗೆ ಹೆದರಿ ಮಗುವನ್ನು ಕಾಡಿಗೆ ಬಿಟ್ಟಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಇದಲ್ಲದೆ ಇಬ್ಬರ ಮನೆಗಳಿಗೂ ಪೊಲೀಸರು ಬರುವವರೆಗೂ ಈ ವಿಚಾರದ ಬಗ್ಗೆ ಯಾವುದೇ ಸುಳಿವು ಲಭಿಸಿಲ್ಲ ಎನ್ನಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಳು ತಂದೆ-ತಾಯಿಯ ವಿಚಾರಣೆ ಬಳಿಕ ತಿಳಿದು ಬರಬೇಕಾಗಿದೆ