ಬೆಂಗಳೂರು:ಕಾಮಿಡಿ ಕಚಗುಳಿ ನೀಡಿದ್ದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ ; ಕಂಬನಿ ಮಿಡಿದ ಕನ್ನಡ ಚಿತ್ರರಂಗ

ಬೆಂಗಳೂರು:ಕಾಮಿಡಿ ಕಚಗುಳಿ ನೀಡಿದ್ದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ ; ಕಂಬನಿ ಮಿಡಿದ ಕನ್ನಡ ಚಿತ್ರರಂಗ


ಬೆಂಗಳೂರು, ಏ 14: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ತಮ್ಮ 76ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಚಂದನವನದ ಖ್ಯಾತ ಹಾಸ್ಯನಟನ ನಿಧನಕ್ಕೆ ಸಂತಾಪ ವ್ಯಕ್ತವಾಗುತ್ತಿದೆ. 

ಕಿರುತೆರೆ to ಹಿರಿತೆರೆ;

 80-90ರ ದಶಕದ ಸಂದರ್ಭ ಬೇಡಿಕೆ ಹೊಂದಿದ್ದ ಇವರು ಶ್, ತರ್ಲೆ ನನ್ಮಗ, ನ್ಯೂಸ್ನಂತಹ ಹಿಟ್ ಚಿತ್ರಗಳಲ್ಲಿ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪಾಪ ಪಾಂಡು, ಮಾಂಗಲ್ಯ, ಜೋಕಾಲಿ, ರೋಬೋ ಫ್ಯಾಮಿಲಿಯಂತಹ ಸಾಲು ಸಾಲು ಸೀರಿಯಲ್ಗಳಲ್ಲಿಯೂ ಬಣ್ಣ ಹಚ್ಚಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡು ಪ್ರೇಕ್ಷಕರನ್ನು ರಂಜಿಸಿದ್ದಾರೆ.

Bank Janardhan Heart Attack | Kannada Actor Bank Janardhan Heart Attack  Latest Health News - Filmibeat

1949ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್, ಕಾಮಿಡಿ ರೋಲ್ಗಳ ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು. ನೂರಾರು ಚಿತ್ರಗಳಲ್ಲಿನ ಅಭಿನಯ ಇವರಿಗೆ ವಿಭಿನ್ನ ಜನಪ್ರಿಯತೆ ತಂದುಕೊಟ್ಟಿತ್ತು. ಗಣೇಶ ಸುಬ್ರಮಣ್ಯ, ಪೊಲೀಸನ ಹೆಂಡತಿ, ಚೆಲುವ, ದೇವ, ರಂಬೆ ಊರ್ವಶಿ ಮೇನಕೆ, ಮಿಸ್ಟರ್ ಬಕ್ರ, ರಕ್ತ ಕಣ್ಣೀರು, ರಂಗ ಎಸ್ಎಸ್ಎಲ್ಸಿ, ಇತ್ತೀಚಿನ ವರ್ಷಗಳಲ್ಲಿ ಪವರ್, ಕೋಟಿಗೊಬ್ಬ 2 ಸೇರಿ ನೂರಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಹಲವು ದಿನಗಳಿಂದ ಬ್ಯಾಂಕ್ ಜನಾರ್ಧನ್‌ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ಬಾರಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಚಿಕಿತ್ಸೆಗಾಗಿ ಅವರನ್ನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬ್ಯಾಂಕ್ ಜನಾರ್ಧನ್ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಮೂಲದ ಬ್ಯಾಂಕ್ ಜನಾರ್ಧನ್ ;

ನಟ ಬ್ಯಾಂಕ್ ಜನಾರ್ಧನ್ ಮೂಲತಃ ಚಿತ್ರದುರ್ಗದವರು. 1949ರಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಜನಿಸಿದವರು ಬ್ಯಾಂಕ್ ಜನಾರ್ಧನ್. ಶಾಲಾ ಶಿಕ್ಷಣವನ್ನ ಹುಟ್ಟೂರಲ್ಲೇ ಪಡೆದ ಜನಾರ್ಧನ್‌ ಆನಂತರ ಬ್ಯಾಂಕ್‌ನಲ್ಲಿ ಕೆಲಸ ಆರಂಭಿಸಿದರು. ಶಾಲಾ - ಕಾಲೇಜಿನಲ್ಲಿ ಓದುತ್ತಿದ್ದ ದಿನಗಳಲ್ಲೇ ಜನಾರ್ಧನ್ ಅವರಿಗೆ ನಾಟಕದ ಗೀಳು ಅಂಟಿತ್ತು. ಹಲವು ನಾಟಕಗಳಲ್ಲಿ ಅಭಿನಯಿಸಿದ ನಂತರ ಬ್ಯಾಂಕ್ ಜನಾರ್ಧನ್‌ 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಬ್ಯಾಂಕ್ ಜನಾರ್ಧನ್ ಹೆಸರು ಬಂದಿದ್ದು ಹೇಗೆ?

ತಮ್ಮ ಹುಟ್ಟೂರಾದ ಹೊಳಲ್ಕೆರೆಯಲ್ಲೇ ಬ್ಯಾಂಕ್‌ವೊಂದರಲ್ಲಿ ಜನಾರ್ಧನ್‌ ಕೆಲಸ ಮಾಡುತ್ತಿದ್ದರು. ಬ್ಯಾಂಕ್‌ ಕೆಲಸದ ಜೊತೆ ಜೊತೆಗೆ ನಟನೆಯನ್ನೂ ಮಾಡುತ್ತಿದ್ದರು. ಹೀಗಾಗಿ, ಅವರು ಚಿತ್ರರಂಗದಲ್ಲಿ ‘ಬ್ಯಾಂಕ್ ಜನಾರ್ಧನ್‌’ ಎಂದೇ ಗುರುತಿಸಿಕೊಂಡರು.

860 ಸಿನಿಮಾಗಳಲ್ಲಿ ಅಭಿನಯ;

‘ಪಿತಾಮಹ’ ಚಿತ್ರದಿಂದ ಬ್ಯಾಂಕ್ ಜನಾರ್ಧನ್‌ ಸಿನಿ ಪಯಣ ಶುರುವಾಯಿತು. ಹಾಸ್ಯ ಪಾತ್ರಗಳಿಂದಲೇ ಜನಪ್ರಿಯತೆ ಪಡೆದ ಬ್ಯಾಂಕ್ ಜನಾರ್ಧನ್‌ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್‌’, ‘ತರ್ಲೆ ನನ್ಮಗ’, ‘ಸೂಪರ್ ನನ್ ಮಗ’, ‘ಭಂಡ ನನ್ ಗಂಡ’, ‘ಮಠ’ ಮುಂತಾದ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಹಾಸ್ಯದ ಹೊಳೆ ಹರಿಸಿದ್ದಾರೆ. 860 ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್‌ ನಟಿಸಿದ್ದಾರೆ. 2023ರಲ್ಲಿ ತೆರೆಕಂಡ ‘ಉಂಡೇನಾಮ’ ಬ್ಯಾಂಕ್ ಜನಾರ್ಧನ್ ನಟಿಸಿದ ಕೊನೆಯ ಸಿನಿಮಾ.

ಸ್ಟಾರ್‌ ನಟರ ಸಿನಿಮಾಗಳಲ್ಲಿ ಅಭಿನಯ;

ಕರಾಟೆ ಕಿಂಗ್ ಶಂಕರ್‌ ನಾಗ್‌, ಅನಂತ್ ನಾಗ್‌, ಕ್ರೇಜಿ ಸ್ಟಾರ್ ರವಿಚಂದ್ರನ್, ಜಗ್ಗೇಶ್‌, ಶಿವರಾಜ್ ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಮುಂತಾದ ಕನ್ನಡದ ಸ್ಟಾರ್‌ ನಟರ ಸಿನಿಮಾಗಳಲ್ಲಿ ಬ್ಯಾಂಕ್‌ ಜನಾರ್ಧನ್‌ ಹಾಸ್ಯ ನಟರಾಗಿ ಮಿಂಚಿದ್ದರು.

Ads on article

Advertise in articles 1

advertising articles 2

Advertise under the article