ಉತ್ತರ ಪ್ರದೇಶ :ಮದ್ಯದ ಅಮಲಿನಲ್ಲಿ ಕೈಯಲ್ಲಿ ರೈಫಲ್ ಹಿಡಿದು ರಸ್ತೆಯಲ್ಲಿ ಹೊರಳಾಡಿದ ಪೊಲೀಸ್..!!
Friday, April 18, 2025

ಉತ್ತರ ಪ್ರದೇಶ :ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಯೊಬ್ಬರು ಸರ್ವಿಸ್ ರೈಫಲ್ ಹಿಡಿದುಕೊಂಡು ಮದ್ಯದ ಅಮಲಿನಲ್ಲಿ ಜನನಿಬಿಡ ರಸ್ತೆಯಲ್ಲಿ ಉರುಳಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮದ್ಯದ ಅಮಲಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಕುಡಿದ ಮತ್ತಿನಲ್ಲಿ ರೈಫಲ್ ಹಿಡಿದುಕೊಂಡು ರಸ್ತೆಯಲ್ಲಿ ಒದ್ದಾಡುತ್ತ ರಸ್ತೆಯಲ್ಲಿ ಬಿದ್ದು ಹೊರಳಾಡಿದ್ದಾರೆ.
ಇದನ್ನು ಗಮನಿಸಿದ ಸ್ಥಳೀಯರು ಮತ್ತು ವಾಹನ ಸವಾರರು ಕಾನ್‌ಸ್ಟೆಬಲ್‌ನನ್ನು ಮೇಲಕ್ಕೆತ್ತಿ ಪಕ್ಕದಲ್ಲಿ ಕೂರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.