ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ; ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವು.

ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ; ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವು.


ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿಜಯನಗರ ನಿವಾಸಿ ಮಂಜುನಾಥ್ ರಾವ್ (47) ಮೃತಪಟ್ಟವರು. 

ಮಂಜುನಾಥ್ ರಾವ್ ಕುಟುಂಬ ಸಮೇತರಾಗಿ ಏಪ್ರಿಲ್ 19 ರಂದು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದು 24ರಂದು ಹಿಂತಿರುಗಿ ಬರಬೇಕಿತ್ತು. ಪ್ರವಾಸದಲ್ಲಿದ್ದಾಗ ಪಹಲ್ಗಾಮ್ ಬಳಿ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ಸುತ್ತಿವರಿದಿದ್ದು ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜೇಯ ಅವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ. 

ಪಲ್ಲವಿ ಬೀರೂರಿನಲ್ಲಿ ಅಡಿಕೆ ಮಾರುಕಟ್ಟೆ ಸಹಕಾರಿ ಸಂಘದಲ್ಲಿ ಮ್ಯಾನೇಜರ್ ಆಗಿದ್ದರು. ಬೀರೂರು ಮತ್ತು ಸಾಗರದ ಇನ್ನೂ ಕೆಲವರು ಸೇರಿ ಕಾಶ್ಮೀರ ಪ್ರವಾಸ ತೆರಳಿದ್ದರು. 

ಪಹಲ್ಗಾಮ್ ಬಳಿಯ ಬೈಸಾರಣ್ ಎಂಬ ಜಾಗಕ್ಕೆ ಪ್ರವಾಸಿಗರು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದ 12 ಪ್ರವಾಸಿಗರು ಗಾಯಗೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article