ಉತ್ತರ ಪ್ರದೇಶ :ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಯುವತಿ.!!!

ಉತ್ತರ ಪ್ರದೇಶ: ಯುವತಿಯೊಬ್ಬಳು ಪ್ರಿಯಕರನನ್ನು ಮನೆಗೆ ಕರೆಸಿ ಸಹೋದರರೊಂದಿಗೆ ಸೇರಿ ಹಲ್ಲೆ ಮಾಡಿ, ಗುಪ್ತಾಂಗ ಕತ್ತರಿಸಿ ಚಿತ್ರಹಿಂಸೆ ಕೊಟ್ಟ ಘಟನೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ನಡೆದಿದೆ.
ಎರಡು ಕುಟುಂಬಗಳ ನಡುವೆ ಈಗಾಗಲೇ ಹಲವು ವಿವಾದಗಳಿದ್ದವು. ಆದರೆ ಯುವತಿ ಆತ ತನ್ನ ಮನೆಗೆ ನುಗ್ಗಿದ್ದ, ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದ ಆಗ ಅನಿವಾರ್ಯವಾಗಿ ಈ ರೀತಿ ಮಾಡಬೇಕಾಯಿತು ಎಂದು ಹೇಳಿಕೆ ನೀಡಿದ್ದಾಳೆ.
ಮಿಥುನ್ ಕುಮಾರ್ ಎಂಬಾತ ತನ್ನ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿದ್ದ. ನಮ್ಮ ಮನೆಯಿಂದ ಮೂರನೇ ಮನೆಯೇ ಅವರದ್ದು. ಆಕೆ ಎರಡು ವರ್ಷಗಳಿಂದ ಮಿಥುನ್ ಜತೆ ಸಂಪರ್ಕದಲ್ಲಿದ್ದಾಳೆ. ತನ್ನ ಭೇಟಿಯಾಗು ಎಂದು ಆತನಿಗೆ ಕರೆ ಮಾಡಿದ್ದಳು.ಆಕೆಯ ಆತನಿಗಿಂತ 8 ವರ್ಷ ದೊಡ್ಡವಳು. ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮಿಥುನ್‌ಗೆ ತಿಳಿಯದೆ ಅಲ್ಲಿಗೆ ಹೋಗಿದ್ದಾನೆ, ಆ ಯುವತಿಯ ನಾಲ್ವರು ಸಹೋದರರು ಅಲ್ಲೇ ಕಾಯುತ್ತಿದ್ದರು ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ಅವರು ಮಿಥುನ್ನನ್ನು ಹಿಡಿದು, ನಿಂದಿಸಿ, ತೀವ್ರವಾಗಿ ಥಳಿಸಿದ್ದಾರೆ. ಸಹೋದರರು ಮಿಥುನ್‌ನ ಕೈ ಮತ್ತು ಕಾಲುಗಳನ್ನು ಕಟ್ಟಿದ್ದರು, ನಂತರ ಆಕೆ ಬ್ಲೇಡ್‌ನಿಂದ ಗುಪ್ತಾಂಗ ಕತ್ತರಿಸಿದ್ದಾಳೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಯಿತು, ನಂತರ ಆರೋಪಿಗಳು ಮಿಥುನ್‌ನನ್ನು ಮನೆಯಿಂದ ಹೊರಗೆ ಎಸೆದಿದ್ದಾರೆ.