ಮಂಗಳೂರು :ಕೋಮು ಸೂಕ್ಷ್ಮ ಪ್ರದೇಶದಲ್ಲಿ ವಕ್ಫ್ ಪ್ರತಿಭಟನಾ ಸಭೆ ; ಅಹಿತಕರ ಘಟನೆ ತಪ್ಪಿಸಲು ಪೊಲೀಸ್ ಸರ್ಪಗಾವಲು, ಎರಡು ಸಾವಿರಕ್ಕೂ ಹೆಚ್ಚು ಖಾಕಿ ಬಂದೋಬಸ್ತ್.

ಮಂಗಳೂರು :ಕೋಮು ಸೂಕ್ಷ್ಮ ಪ್ರದೇಶದಲ್ಲಿ ವಕ್ಫ್ ಪ್ರತಿಭಟನಾ ಸಭೆ ; ಅಹಿತಕರ ಘಟನೆ ತಪ್ಪಿಸಲು ಪೊಲೀಸ್ ಸರ್ಪಗಾವಲು, ಎರಡು ಸಾವಿರಕ್ಕೂ ಹೆಚ್ಚು ಖಾಕಿ ಬಂದೋಬಸ್ತ್.


ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಆಯೋಜಿಸಿದ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ‌ಪೊಲೀಸ್ ಸರ್ಪಗಾವಲಿನ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಡ್ಯಾರ್ ಷಾ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು ಭಾರೀ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. 

ಬಂದೋಬಸ್ತಿಗೆ ಎರಡು ಸಾವಿರಕ್ಕೂ ಅಧಿಕ ಪೊಲೀಸರನ್ನು ಮಂಗಳೂರು ನಗರದ ಅಲ್ಲಲ್ಲಿ ನಿಯೋಜನೆ ಮಾಡಲಾಗಿದೆ. ಐವರು ಎಸ್ಪಿಗಳು ಮತ್ತು ಅಡಿಷನಲ್ ಎಸ್ಪಿಗಳು, 20 ಡಿವೈಎಸ್ ಪಿ, ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ನೇತೃತ್ವ ನೀಡಲಿದ್ದಾರೆ. ಇದಲ್ಲದೆ, 20 ಕೆಎಸ್ ಆರ್ ಪಿ ತುಕಡಿ, 20 ಸಶಸ್ತ್ರ ಪೊಲೀಸ್ ಪಡೆಯನ್ನೂ ನಿಯೋಜನೆ ಮಾಡಲಾಗಿದೆ. 

ಪ್ರತಿಭಟನೆ ನಡೆಯುವ ಸ್ಥಳ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಭದ್ರತೆ ಕಲ್ಪಿಸಲಾಗಿದೆ. ‌ಮುಸ್ಲಿಂ ಬಾಹುಳ್ಯ ಪ್ರದೇಶಗಳು, ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ಈ ಹಿಂದೆ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರುವ ಸದ್ಯ ಉಡುಪಿ, ಕೊಡಗು, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್, ಡಿವೈಎಸ್ಪಿ ದರ್ಜೆಯ ಪೊಲೀಸ್ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿದೆ. 

ಪ್ರತಿಭಟನಾ ಸಭೆ ಮತ್ತು ಆವರಣದಲ್ಲಿ ಇಡೀ ದಿನದ ಪ್ರತಿ ಚಲನವಲನಗಳನ್ನ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡುತ್ತೇವೆ.‌ ಪ್ರತಿಭಟನಾ ಸಭೆ ಆಯೋಜಕರಿಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ. ಈ ಬಗ್ಗೆ ಆಯೋಜಕರಿಂದ ಮುಚ್ಚಳಿಕೆ ಬರೆಸಿ ನಿಗದಿತ ಮೊತ್ತದ ಬಾಂಡ್ ಪಡೆಯಲಾಗಿದೆ. ಅಲ್ಲದೆ, ಹೆದ್ದಾರಿಯಲ್ಲಿ ಯಾವುದೇ ಸಂಚಾರ ನಿರ್ಬಂಧ ಮಾಡಿಲ್ಲ. ಮುನ್ನಚ್ಚೆರಿಕಾ ಕ್ರಮವಾಗಿ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ. 

ಮಂಗಳೂರು ಕೋಮು ಸೂಕ್ಷ್ಮ ಜಿಲ್ಲೆಯಾಗಿರುವುದರಿಂದ ಮತ್ತು ಕಾಂಗ್ರೆಸ್ ಆಡಳಿತ ಇರುವುದರಿಂದ ಯಾವುದೇ ಕಾರಣಕ್ಕು ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ಏನು ಬೇಕಾದರೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಪೊಲೀಸ್ ಕಮಿಷನರ್ ಮತ್ತು ಎಸ್ಪಿಗಳಿಗೆ ರಾಜ್ಯ ಸರ್ಕಾರದಿಂದ ಸೂಚನೆ ನೀಡಲಾಗಿದೆ. 2019ರಲ್ಲಿ ಸಿಎಎ ಕಾಯ್ದೆ ವಿರುದ್ಧ ಮುಸ್ಲಿಮರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಿಂಸಾಚಾರ ನಡೆದು ಇಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು. ಹೀಗಾಗಿ ಈ ಬಾರಿ ವಿಶೇಷ ನಿಗಾ ಇಡುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article