ಕೇರಳ:ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು!!
Friday, April 11, 2025

ಕೊಯಮತ್ತೂರು: ವಿದ್ಯಾರ್ಥಿನಿಯೊಬ್ಬಳು ಮುಟ್ಟಾಗಿದ್ದಕ್ಕೆ ಶಿಕ್ಷಕರು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಘಟನೆ ತಮಿಳುನಾಡಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಈ ವಿಡಿಯೋ ಮೀಡಿಯಾಗಳಲ್ಲಿ ವೈರಲ್ ಆಗಿದೆ.
8ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ಬಂದ ಬಳಿಕ ಮುಟ್ಟು ಅದ ಕಾರಣ ಆಕೆಯನ್ನು ಪ್ರಾಂಶುಪಾಲರ ಬಳಿ ಹೇಳಿಕೊಂಡಾಗ ಅವರು ಶಾಲೆಯ ಹೊರಗಡೆ ಕುಳಿತುಕೊಂಡು ಪರೀಕ್ಷೆ ಬರೆಯುವಂತೆ ಹೇಳಿದ್ದಾರೆ.
ವಿದ್ಯಾರ್ಥಿನಿಯ ತಾಯಿ ಮುಟ್ಟಿನ ಸಮಯದಲ್ಲಿ ಹೊರಗೆ ಕೂರಿಸಿ ಪರೀಕ್ಷೆ ಬರೆಯುವಂತೆ ಏಕೆ ಹೇಳಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.
ತನ್ನ ಮಗಳು ಪರೀಕ್ಷೆಗೆ ಶಾಲೆಗೆ ಹೋಗುತ್ತಿದ್ದಾಗ ತನ್ನ ಮುಟ್ಟು ಪ್ರಾರಂಭವಾಗಿದೆ ಎಂದು ಅರಿತುಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಪ್ರಾಂಶುಪಾಲರಿಂದ ಸ್ಯಾನಿಟರಿ ಪ್ಯಾಡ್ ಕೇಳಿದ ನಂತರ, ತರಗತಿಯಿಂದ ಹೊರಹೋಗುವಂತೆ ಸೂಚಿಸಲಾಯಿತು ಮತ್ತು ಸುಮಾರು ಒಂದು ಗಂಟೆಗಳ ಕಾಲ ಹೊರಗೆ ನಿಲ್ಲುವಂತೆ ಒತ್ತಾಯಿಸಲಾಯಿತು ಎಂದು. ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.