ಅಲಹಾಬಾದ್ :ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್
Thursday, April 17, 2025

ಅಲಹಾಬಾದ್: ತಂದೆ ತಾಯಿಯ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ಇರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಹೆತ್ತವರ ವಿರುದ್ಧವಾಗಿ ಮದುವೆಯಾದ ಪ್ರೇಮಿಗಳು ಅವರ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾದ ಬೆದರಿಕೆ ಇಲ್ಲದಿದ್ದರೆ ಅಂತಹ ಜನರು ಪೊಲೀಸ್ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಪ್ರೇಮ ದಂಪತಿಗಳಿಂದ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಈ ತೀರ್ಪು ನೀಡಿದ್ದಾರೆ. ಸ್ವಂತ ಇಚ್ಛೆಯಿಂದ ಮದುವೆಯಾಗುವವರಿಗೆ ಪೊಲೀಸ್ ರಕ್ಷಣೆಯ ಹಕ್ಕಿಲ್ಲ, ಅವರ ಜೀವ ಅಥವಾ ಸ್ವಾತಂತ್ರ್ಯಕ್ಕೆ ಏನಾದರೂ ಬೆದರಿಕೆ ಇದ್ದಾಗ ಮಾತ್ರ ಭದ್ರತೆ ಒದಗಿಸಬಹುದು ಎಂದು ಹೈಕೋರ್ಟ್ ಹೇಳಿದೆ.