ಬೆಂಗಳೂರು :ಯುವತಿಯ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಕಾಮುಕರು
Sunday, April 6, 2025

ಬೆಂಗಳೂರು: ಯುವತಿಯೊಬ್ಬಳನ್ನು ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ.
ಯುವತಿ ತನ್ನ ಸ್ನೇಹಿತರ ಮನೆಗೆ ಹೋಗಿ ಬೆಳಗ್ಗಿನ ಜಾವ 4:30 ಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾಮುಕರು ಆಕೆಯ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.ಈ ವೇಳೆ ರಕ್ಷಣೆಗೆ ಬಂದ ಸಾರ್ವಜನಿಕರಿಗೆ ಚಾಕು ತೋರಿಸಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ಯುವತಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ