ಚಿತ್ರದುರ್ಗ :ಟೈರ್ ಸ್ಫೋಟಗೊಂಡು ಡಿವೈಡರ್‌ಗೆ ಇನ್ನೋವಾ ಡಿಕ್ಕಿಯಾಗಿ ಮೂವರು ಸಾವು..!!
Wednesday, April 30, 2025

ಚಿತ್ರದುರ್ಗ: ಇನ್ನೋವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28), ಶರವಣ (31), ಸೇಂದಿಲ್ (29) ಎಂದು ಗುರುತಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಮೃತ ಅರ್ಜುನ್ ಚನ್ನೈನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಿದ್ದರು. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.