ಬೆಂಗಳೂರು:ರಾಜ್ಯದಲ್ಲಿ ಉಬರ್, ರ‌್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಸಚಿವ ಆದೇಶ.!!
Friday, April 25, 2025

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉಬರ್, ರ‌್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.
ಹೈಕೋರ್ಟಿನ ಆದೇಶದಂತೆ ರಾಜ್ಯಾಧ್ಯಂತ ಉಬರ್, ರ‌್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಅವರು ಸೂಚಿಸಿದ್ದಾರೆ.
ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ, ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಹೈಕೋರ್ಟ್‌ನ ಏಪ್ರಿಲ್ 2ರ ಆದೇಶಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಬೈಕ್, ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಆರು ವಾರಗಳ ಕಾಲಾವಕಾಶ ನೀಡಿರುತ್ತದೆ. ಆದ್ದರಿಂದ, ಉಚ್ಚ ನ್ಯಾಯಾಲಯದ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.