ಮಂಗಳೂರು : ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ ; ಮಸೂದೆ ಪ್ರತಿ ಹರಿದು ಆಕ್ರೋಶ..!

ಮಂಗಳೂರು : ಲೋಕಸಭೆಯಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿದ್ದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಲೋಕಸಭೆಯಲ್ಲಿ ವಕ್ಫ್ ಮಸೂದೆ ತಂದರೂ ಈ ದೇಶದ ಮುಸ್ಲಿಮರು ಒಪ್ಪಲು ಖಂಡಿತ ಸಾಧ್ಯವಿಲ್ಲ. ಮಾರಕ ಮಸೂದೆಯನ್ನು ಉಲಮಾಗಳು ವಿರೋಧಿಸಿದ್ದಾರೆ. ಅವರು ಹೋರಾಟಕ್ಕೆ ಕರೆ ಕೊಟ್ಟರೆ ಬ್ರಿಟಿಷರನ್ನು ದೇಶದಿಂದ ಹೇಗೆ ಹೊರದಬ್ಬಿದ್ದೇವೋ ಅದೇ ರೀತಿ ಸಂಘ ಪರಿವಾರವನ್ನು ಹೋರಾಟದ ಮೂಲಕ ಈ ದೇಶದಿಂದ ಓಡಿಸಲಿಕ್ಕಿದ್ದೇವೆ ಎಂದು ಎಚ್ಚರಿಸಿದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ, ಮಸೂದೆ ಪ್ರತಿಯನ್ನು ವೇದಿಕೆಯಲ್ಲಿ ಹರಿದು ಆಕ್ರೋಶ ವ್ಯಕ್ತಪಡಿಸಿದರು.




ಪ್ರತಿಭಟನಾ ಸಭೆಯಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ,ಮಿಸ್ರಿಯ ಕಣ್ಣೂರು, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ,ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ನಗರ ಉಪಾಧ್ಯಕ್ಷೆ ಆಯಿಷಾ ಬಜ್ಪೆ, ನಗರ ವಿಮ್ ಅಧ್ಯಕ್ಷೆ ನಿಶಾ ವಾಮಂಜೂರು ಉಪಸ್ಥಿತರಿದ್ದರು.