ಬೆಂಗಳೂರು :ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್; ಸರ್ಕಾರ ನಿರ್ಧಾರ.

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೇರಪಿ ಮತ್ತು ಬೆಂಬಲ ಸೇವೆಗಳನ್ನು ಒದಗಿಸುವ ಉದೇಶದಿಂದ SAST ನೋಂದಾಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರಿದ ಕೀಮೋಥೆರಪಿ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಹಬ್- ಅಂಡ್-ಸ್ಟೋಕ್ ಮಾದರಿಯಲ್ಲಿ ಪ್ರಾರಂಭಿಸಲಾಗುವುದು ಎಂದು ಸರ್ಕಾರ ಹೇಳಿದೆ.
ರಾಜ್ಯದಲ್ಲಿ ICMR-NCRP 2023 ವರದಿಯ ಪ್ರಕಾರ ಸುಮಾರು 70,000 ಹೊಸ ಕ್ಯಾನ್ಸರ್ ಪ್ರಕರಣಗಳನ್ನು ವರದಿಯಾಗುತ್ತಿದೆ.
ಸ್ತನ ಕ್ಯಾನ್ಸರ್ (18%), ಗರ್ಭಕಂಠದ ಕ್ಯಾನ್ಸರ್ (14%), ಬಾಯಿ ಕ್ಯಾನ್ಸರ್ (12%), ಶ್ವಾಸಕೋಶ ಕ್ಯಾನ್ಸರ್ (8%), ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ ರೋಗಿಗಳ ಪ್ರಮಾಣ ಶೇ 6ರಷ್ಟಿದೆ.
ಬೆಂಗಳೂರು, ಹುಬ್ಬಳ್ಳಿ, ಕಲಬುರ್ಗಿ, ಬೆಳಗಾವಿ ಮತ್ತು ಮೈಸೂರು ನಗರಗಳಲ್ಲಿರು ಕೀಮೋಥೇರಪಿ ಸೇವೆ ಪಡೆಯಲು ಶೇಕಡಾ 60ರಷ್ಟು ರೋಗಿಗಳು 100 ಕಿ.ಮೀ.ಗಿಂತ ಹೆಚ್ಚು ಪ್ರಯಾಣಿಸುತ್ತಾರೆ.
ಯಾವ್ಯಾವ ಜಿಲ್ಲೆಯಲ್ಲಿ ಆರಂಭ?:
