ಪಂಜಾಬ್: ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ, ಹಲವರ ಸ್ಥಿತಿ ಗಂಭೀರ ; ಐವರ ಬಂಧನ.

ಅಮೃತಸರ: ಜಿಲ್ಲೆಯ ಮಜಿತ ಕ್ಷೇತ್ರದಿಂದ ದುರಂತ ಸುದ್ದಿಯೊಂದು ಕೇಳಿ ಬಂದಿದೆ. ಮಜಿತಾದ ಮೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನರು ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಸಾವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಪೂರಿತ ಮದ್ಯ ಸೇವಿಸಿದವರ ಆರೋಗ್ಯ ಹದಗೆಟ್ಟ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಆಡಳಿತ ಮತ್ತು ಜಿಲ್ಲಾಧಿಕಾರಿ ಸಾಕ್ಷಿ ಸಾಹ್ನಿ ಬೀಡುಬಿಟ್ಟಿದ್ದಾರೆ.
![]()
ಮಜಿತಾ ಕ್ಷೇತ್ರದ ಸುಮಾರು ಮೂರು ಹಳ್ಳಿಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತಿಳಿದುಬಂದ ಕೂಡಲೇ ಮದ್ಯ ಸೇವಿಸಿದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚಿಕಿತ್ಸೆಗೆ ಕಳುಹಿಸಬೇಕು ಎಂದು ಗುರುದ್ವಾರಗಳಲ್ಲಿ ಘೋಷಣೆಗಳನ್ನು ಮಾಡಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬ ಪ್ರಮುಖ ಕಿಂಗ್‌ಪಿನ್ ಸೇರಿದಂತೆ ಅವರ ಯಂತ್ರೋಪಕರಣಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ 2 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
10 ಮಂದಿ ಬಂಧನ:
ಘಟನೆಯ ನಂತರ ಪೊಲೀಸ್ ಆಡಳಿತವು ಸಕ್ರಿಯವಾಗಿದೆ. ಪಂಜಾಬ್ ಸರ್ಕಾರದ ಕಟ್ಟುನಿಟ್ಟಿನ ಸೂಚನೆಗಳ ಮೇರೆಗೆ ಮಜಿತಾದಲ್ಲಿನ ನಕಲಿ ಮದ್ಯ ವ್ಯವಹಾರದ ಮಾಸ್ಟರ್ ಮೈಂಡ್ ಪ್ರಭ್ಜಿತ್ ಸಿಂಗ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.