ನೆಲಮಂಗಲ :ಆಯಿಲ್ ಗೋಡೌನ್ ನಲ್ಲಿ ಅಗ್ನಿ ಅವಘಡ – 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗಾಹುತಿ.
Monday, May 12, 2025

ನೆಲಮಂಗಲ: ಶಾರ್ಟ್ ಸರ್ಕ್ಯೂಟ್‌ನಿಂದ ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಘಟನೆ ನಡೆದಿದೆ.
ಶೆಲ್ ಕಂಪನಿಗೆ ಸೇರಿದ ಗೋಡೌನ್ ನಲ್ಲಿ 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿ 20 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುತ್ತಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ
ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭ ಹಿನ್ನೆಲೆ ಹೆಚ್ಚಿನ ಸ್ಟಾಕ್ ಶೇಖರಣೆ ಮಾಡಲಾಗಿತ್ತು. ಯುದ್ಧದ ಪರಿಣಾಮವಾಗಿ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು. ರಾಜ್ಯದಲ್ಲಿ ಯಾವುದೇ ಆಯಿಲ್ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಆದರೆ, ಬೆಂಕಿ ಅವಘಡದಿಂದ ಆಯಿಲ್ ನಷ್ಟವಾಗಿದೆ.