ಬ್ಯಾಡಗಿ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ; ಕಾರಿಗೆ ಡಿಕ್ಕಿ ಹೊಡೆದ ಲಾರಿ; ಸ್ಥಳದಲ್ಲೇ 6 ಜನರ ಸಾವು.
Thursday, May 8, 2025
ಹಾವೇರಿ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.
ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.