ಬೆಂಗಳೂರು: ರಾಜ್ಯದಲ್ಲಿ ಇನ್ನೂ 6 ದಿನ ಮಳೆ: ವರುಣನ ಆರ್ಭಟಕ್ಕೆ ನಾಲ್ವರು ಬಲಿ! ಮಲೆನಾಡು ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ.

ಬೆಂಗಳೂರು: ರಾಜ್ಯದಲ್ಲಿ ಇನ್ನೂ 6 ದಿನ ಮಳೆ: ವರುಣನ ಆರ್ಭಟಕ್ಕೆ ನಾಲ್ವರು ಬಲಿ! ಮಲೆನಾಡು ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಇನ್ನೂ ಆರು ದಿನಗಳ ಕಾಲ ಮುಂದುವರಿಯಲಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜೂನ್ 1ರವರೆಗೆ ಆರೆಂಜ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ನಾಲ್ವರು ಮೃತಪಟ್ಟಿದ್ದಾರೆ. ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ.

ಬುಧವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆಯಾದರೂ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Ads on article

Advertise in articles 1

advertising articles 2

Advertise under the article