ಬೆಂಗಳೂರು:ಅಬ್ಬರಿಸುತ್ತಿರುವ ಮುಂಗಾರು ಮಳೆಗೆ  ಹಲವು ಅವಾಂತರಗಳ ಸೃಷ್ಟಿ; ಮಳೆ ಸಂಬಂಧಿತ ಅವಘಡಗಳಿಗೆ ಹಲವಾರು ಮಂದಿ ಬಲಿ;  ಮಳೆ ಆರ್ಭಟಕ್ಕೆ ಕರ್ನಾಟಕದಲ್ಲಿ 8 ಮಂದಿ ಸಾವು.!!!

ಬೆಂಗಳೂರು:ಅಬ್ಬರಿಸುತ್ತಿರುವ ಮುಂಗಾರು ಮಳೆಗೆ ಹಲವು ಅವಾಂತರಗಳ ಸೃಷ್ಟಿ; ಮಳೆ ಸಂಬಂಧಿತ ಅವಘಡಗಳಿಗೆ ಹಲವಾರು ಮಂದಿ ಬಲಿ; ಮಳೆ ಆರ್ಭಟಕ್ಕೆ ಕರ್ನಾಟಕದಲ್ಲಿ 8 ಮಂದಿ ಸಾವು.!!!

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಮಳೆ ಸಂಬಂಧಿತ ಅವಘಡಗಳು ಹಲವರನ್ನು ಬಲಿ ಪಡೆದಿವೆ. ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 8 ಮಂದಿ ಮೃತಪಟ್ಟಿದ್ದಾರೆ.

ಬೆಳಗಾವಿ ಅ ಜಿಲ್ಲೆ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದ ಗಣೇಶ್ ಕಾಂಬಳೆ ಎಂಬ 9 ವರ್ಷದ ಬಾಲಕ ಹಾಗೂ ದೀಪಕ್ ಕಾಂಬಳೆ ಎಂಬ 11 ವರ್ಷದ ಬಾಲಕ ಎತ್ತಿನಗಾಡಿಯಲ್ಲಿ ತೆರಳುತ್ತಿದ್ದರು.

ನಿರಂತರ ಮಳೆಯಿಂದಾಗಿ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲಿ ದಾರಿ ಕಾಣದೇ ಎತ್ತಿನ ಬಂಡಿ ಮಗುಚಿಬಿದ್ದಿದೆ. ಪರಿಣಾಮವಾಗಿ ಮಕ್ಕಳಿಬ್ಬರು ಮೃತಪಟ್ಟಿದ್ದು, ಒಂದು ಎತ್ತು ಕೂಡ ಸಾವನ್ನಪ್ಪಿದೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಶಾಂತಮ್ಮ ತಳವಾರ ಎಂಬವರು ಮೃತಪಟ್ಟಿದ್ದಾರೆ . ಕಂದಾಯ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬ್ಯಾಡಗಿ ತಾಲೂಕಿನ ಶಿಡೇನೂರು ಬಳಿ ಗಾಳಿಯಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ವಿದ್ಯುತ್‌ ಸ್ಪರ್ಶದಿಂದ ಜಮೀನಿನಲ್ಲಿದ್ದ ರೈತ ಬಾಬುಲಾಲ್ ಬ್ಯಾಡಗಿ ಅಸುನೀಗಿದ್ದಾರೆ. ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಶಶಾಂಕಗೌಡ ಮುದ್ದಿನಗೌಡ ಎಂಬ ಬಾಲಕ ಇಹಲೋಕ ತ್ಯಜಿಸಿದ್ದಾನೆ. ಪಂಪ್‌ಸೆಟ್‌ ಮೋಟರ್ ಆನ್‌ ಮಾಡಲು ಹೋದಾಗ ದುರಂತ ಸಂಭವಿಸಿದೆ.

ಇತ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಗಳಾಪುರದಲ್ಲಿ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ಕರೆಂಟ್ ಶಾಕ್ ಹೊಡೆದು ರಂಗಪ್ಪ ಎಂಬವರು ಸಾವಿಗೀಡಾಗಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಬಿದ್ದು ವಿಷ್ಣು ಬೆಳ್ಯಪ್ಪ ಎಂಬವರು ಮೃತಪಟ್ಟಿದ್ದಾರೆ.

ಮಳೆ ಹೆಚ್ಚಾಗುತ್ತಿದ್ದಂತೆಯೇ ನದಿಗಳ ಅಬ್ಬರ ಕೂಡಾ ಹೆಚ್ಚಾಗಿದೆ. ಈ ಮಧ್ಯೆ, ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ನಾಲ್ವರ ಪೈಕಿ ಓರ್ವ ವಿದ್ಯಾರ್ಥಿ ನಾಪತ್ತೆ ಆಗಿದ್ದು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ.

Ads on article

Advertise in articles 1

advertising articles 2

Advertise under the article